Uncategorized

*ಬೇಳೆ ಬೆಲೆ ಇಳಿಕೆಗೆ ಕ್ರಮ: ಕೇಂದ್ರ ಸಚಿವ ಪ್ರಲ್ಹಾದ ಜೋಶಿ*

ಪ್ರಗತಿವಾಹಿನಿ ಸುದ್ದಿ: ಬೇಳೆ-ಕಾಳು ಬೆಲೆ ಇಳಿಸುವಂತೆ ಕೇಂದ್ರ ಆಹಾರ ಮತ್ತು ಗ್ರಾಹಕ ವ್ಯವಹಾರಗಳ ಸಚಿವ ಪ್ರಲ್ಹಾದ ಜೋಶಿ ಸೂಚಿಸಿದ್ದಾರೆ.

ನವದೆಹಲಿಯಲ್ಲಿ ಗ್ರಾಹಕ ವ್ಯವಹಾರಗಳ ಇಲಾಖೆ ಉನ್ನತ ಅಧಿಕಾರಿಗಳ ಸಭೆ ನಡೆಸಿ ಚರ್ಚಿಸಿದ ಸಚಿವರು ಈ ಬಗ್ಗೆ ತ್ವರಿತ ಕ್ರಮಕ್ಕೆ ಸಲಹೆ ಮಾಡಿದ್ದಾರೆ.

ದೇಶದ ಪ್ರಮುಖ ಮಾರುಕಟ್ಟೆಗಳಲ್ಲಿ ತೊಗರಿ, ಕಡಲೆ ಮತ್ತು ಉದ್ದು ಮತ್ತಿತರ ಬೇಳೆಗಳ ಬೆಲೆಯಲ್ಲಿ ಶೇ.4ರಷ್ಟು ಕುಸಿತ ಕಂಡಿದೆ. ಹಾಗಿದ್ದರೂ ವ್ಯಾಪಾರಿಗಳು ದರ ಇಳಿಸದಿರುವುದು ಗಮನಕ್ಕೆ ಬಂದಿದೆ. ಎಲ್ಲ ವರ್ತಕರು ಬೇಳೆ- ಕಾಳು ಬೆಲೆ ಕಡಿಮೆ ಮಾಡುವಂತೆ ಕ್ರಮ ಕೈಗೊಳ್ಳಿ ಎಂದು ಸಚಿವರು ಸೂಚಿಸಿದರು.

ಗ್ರಾಹಕರಿಗೆ ಕೈಗೆಟಕುವ ದರದಲ್ಲಿ ಧಾನ್ಯಗಳು ಲಭಿಸುವಂತೆ ಮಾಡಲು ಕೇಂದ್ರ ಗ್ರಾಹಕ ವ್ಯವಹಾರಗಳ ಇಲಾಖೆ ಸಕ್ರಿಯವಾಗಿ ಕಾರ್ಯ ನಿರ್ವಹಿಸುತ್ತಿದೆ ಎಂದೂ ಸಚಿವರು ಇದೇ ವೇಳೆ ಹೇಳಿದರು.

ಸಣ್ಣ ಸಣ್ಣ ವ್ಯಾಪಾರದ ಮಳಿಗೆಗಳಲ್ಲಿ ಮಾತ್ರ ತೊಗರಿ, ಉದ್ದು, ಕಡಲೆ ಬೇಳೆ ಬೆಲೆ ಇಳಿಸಲಾಗಿದೆ. ಆದರೆ, ದೊಡ್ಡ ದೊಡ್ಡ ವ್ಯಾಪಾರಿ ಮಳಿಗೆಗಳಲ್ಲಿ ಬೆಲೆ ಇಳಿಸದುರುವುದು ಗಮನಕ್ಕೆ ಬಂದಿದೆ. ಕೂಡಲೇ ಇದರ ವಿರುದ್ಧ ಕ್ರಮಕ್ಕೆ ಮುಂದಾಗಿದೆ ಎಂದು ಅಧಿಕಾರಿಗಳಿಗೆ ಸೂಚಿಸಿದರು.

ಈಗಾಗಲೇ ಬೇಳೆಗಳ ಬೆಲೆಯನ್ನುವಿಕೂಡಲೇ ಇಳಿಸುವಂತೆ ಈ ದೊಡ್ಡ ವರ್ತಕರಿಗೂ ಸೂಚನೆ ನೀಡಲಾಗಿದೆ. ಈ ನಿರ್ದೇಶನ ಅನುಸರಿಸಲು ವಿಫಲವಾದರೆ ಅವರ ವಿರುದ್ಧ ಕಠಿಣ ಕ್ರಮ ತೆಗೆದುಕೊಳ್ಳಲಾಗುತ್ತದೆ ಎಂದು ಸಚಿವ ಪ್ರಲ್ಹಾದ ಜೋಶಿ ಎಚ್ಚರಿಸಿದ್ದಾರೆ 

2025ಕ್ಕೆ GDP ಶೇ.7 ಬೆಳವಣಿಗೆ

ಐಎಂಎಫ್ ವರದಿ ಪರಿಷ್ಕರಿಸಿದ್ದು, 2025 ರಲ್ಲಿ ಭಾರತದ GDP ಬೆಳವಣಿಗೆ ಶೇ.7 ರಷ್ಟು ಆಗಲಿದೆ ಎಂದು ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಹೇಳಿದ್ದಾರೆ.

ಜಾಗತಿಕ ಆರ್ಥಿಕತೆಯ ಸಾಲಿನಲ್ಲಿ ಭಾರತ ಅಗ್ರ ಸ್ಥಾನದಲ್ಲಿದೆ. ಪ್ರಧಾನಿ ನರೇಂದ್ರ ಮೋದಿ ಅವರು ಭಾರತವನ್ನು ಉನ್ನತ ಸ್ಥರಕ್ಕೆ ಕೊಂಡೊಯ್ಯುತ್ತಿದ್ದಾರೆ ಎಂಬುದಕ್ಕೆ ಐಎಂಎಫ್ ನ ಈ ವರದಿಯೇ ನಿದರ್ಶನ ಎಂದು ಜೋಶಿ ಪ್ರತಿಪಾದಿಸಿದ್ದಾರೆ.

ಭಾರತದ ಬೆಳವಣಿಗೆಯು ಆರ್ಥಿಕ ವರ್ಷ 2025 ರಲ್ಲಿ ಶೇ.7ರಷ್ಟು GDP ಬೆಳವಣಿಗೆಯ ಮುನ್ಸೂಚನೆ ನೀಡಿದ್ದು, ಪ್ರಧಾನಿ ಮೋದಿಯವರ ಸಮರ್ಥ ನಾಯಕತ್ವ ಅಸಾಧ್ಯವಾದುದನ್ನು ಸಾಧ್ಯವಾಗಿಸಿದೆ ಎಂದು ಪ್ರಲ್ಹಾದ ಜೋಶಿ ಬಣ್ಣಿಸಿದ್ದಾರೆ.

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button