Belagavi NewsBelgaum NewsKannada NewsKarnataka News
*ಚುರುಕಾದ ನೈಋತ್ಯ ಮಾನ್ಸೂನ್: ಹಲವೆಡೆ ಭಾರಿ ಮಳೆಯ ಮೂನ್ಸೂಚನೆ*

ಪ್ರಗತಿವಾಹಿನಿ ಸುದ್ದಿ: ರಾಜ್ಯಾದ್ಯಂತ ನೈಋತ್ಯ ಮಾನ್ಸೂನ್ ಚುರುಕಾಗಿದ್ದು ಆ. 24ರ ವರೆಗೆ ಹಲವೆಡೆ ಭಾರಿ ಮಳೆ ಆಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಮಂಗಳೂರು, ಉಡುಪಿ ಸೇರಿದಂತೆ ಕರಾವಳಿಯ ಬಹುತೇಕ ಭಾಗಗಳಲ್ಲಿ ಮೋಡಕವಿದ ವಾತಾವರಣವಿದ್ದು, ಇಡೀ ದಿನ ಬಿಟ್ಟು ಬಿಟ್ಟು ಭಾರಿ ಮಳೆಯಾಗುವ ಮುನ್ಸೂಚನೆ ಇದೆ. ಕಡಲಿನಲ್ಲಿ ಗಾಳಿಯ ವೇಗ ಹೆಚ್ಚಿರುವುದರಿಂದ ಮೀನುಗಾರರು ಎಚ್ಚರಿಕೆಯಿಂದಿರಲು ಸೂಚಿಸಲಾಗಿದೆ.
ಉತ್ತರ ಒಳನಾಡುಗಳಾದ ಬೆಳಗಾವಿ, ಧಾರವಾಡ, ಹಾವೇರಿ, ಕಲಬುರಗಿ, ಯಾದಗಿರಿಯಲ್ಲಿ ಸಾಧಾರಣ ಮಳೆಯಾಗಲಿದ್ದು, ಉಳಿದಂತೆ ಮೋಡಕವಿದ ವಾತಾವರಣ ಇರಲಿದೆ. ರಾಜಧಾನಿ ಬೆಂಗಳೂರು ಸೇರಿದಂತೆ ಸುತ್ತಮುತ್ತಲಿನ ಜಿಲ್ಲೆಗಳಲ್ಲಿ ಭಾಗಶಃ ಮೋಡಕವಿದ ವಾತಾವರಣ ಇರಲಿದ್ದು, ಸಂಜೆ ಅಥವಾ ರಾತ್ರಿಯ ವೇಳೆ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ.



