
ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಸಾಮಾಜಿಕ ಕಾರ್ಯಕರ್ತೆ ತೀಸ್ತಾ ಸೆಟಲ್ವಾಡ್ ಹಾಗೂ ಮಾಜಿ ಡಿಜಿಪಿ ಆರ್.ಬಿ ಶ್ರೀಕುಮಾರ್ ಅವರನ್ನು ಮ್ಯಾಜಿಸ್ಟ್ರೇಟ್ ನ್ಯಾಯಾಲಯ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದೆ.
2002ರ ಗುಜರಾತ್ ಗಲಭೆ ಪ್ರಕರಣದ ಬಗ್ಗೆ ಆಗಿನ ಸಿಎಂ ನರೇಂದ್ರಮೋದಿ ಅವರಿಗೆ ಎಸ್ ಐಟಿ ನೀಡಿದ್ದ ಕ್ಲೀನ್ ಚಿಟ್ ನ್ನು ಸುಪ್ರೀಂ ಕೋರ್ಟ್ ಎತ್ತಿ ಹಿಡಿದಿತ್ತು. ಇದಾದ ಬಳಿಕ ಅಹಮದಾಬಾದ್ ಡಿಟೆಕ್ಷನ್ ಆಫ್ ಕ್ರೈಂ ಬ್ರ್ಯಾಂಚ್ ತೀಸ್ತಾ ಹಾಗೂ ಶ್ರೀಕುಮಾರ್ ಅವರನ್ನು ಬಂಧಿಸಿತ್ತು.
ಇದೀಗ ಇಬ್ಬರನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ. ತೀಸ್ತಾ ಸ್ರ್ಟಲ್ವಾಡ್ ಹಾಗೂ ಶ್ರೀಕುಮಾರ್ ವಿರುದ್ಧ ಕ್ರಿಮಿನಲ್ ಪಿತೂರಿ, ಫೋರ್ಜರಿ ಹಾಗೂ ಐಪಿಸಿ ಇತರ ಸೆಕ್ಷನ್ ಗಳ ಅಡಿಯಲ್ಲಿ ಇನ್ಸ್ ಪೆಕ್ಟರ್ ದರ್ಶನ್ ಸಿಂಹ ಬರಾದ್ ಅವರು ಡಿಸಿಬಿಯಲ್ಲಿ ದಾಖಲಿಸಿದ ಎಫ್ ಐಆರ್ ಆಧಾರದ ಮೇಲೆ ಪ್ರಕರಣ ದಾಖಲಿಸಿದ್ದಾರೆ.
ಕಾರು-ಕಂಟೇನರ್ ಮುಖಾಮುಖಿ ಡಿಕ್ಕಿ: ಕಾರು ಚಾಲಕ ಸಹಿತ ಸ್ಥಳದಲ್ಲೇ ಇಬ್ಬರ ಸಾವು, ನಾಲ್ವರಿಗೆ ಗಂಭೀರ ಗಾಯ