Film & Entertainment

*ಕಿರುತೆರೆ ಖ್ಯಾತ ನಟ ಚರಿತ್ ಅರೆಸ್ಟ್*

ಪ್ರಗತಿವಾಹಿನಿ ಸುದ್ದಿ: ಕಿರುತೆರೆ ಖ್ಯಾತ ನಟ ಚರಿತ್ ಬಾಳಪ್ಪ ವಿರುದ್ಧ ಯುವತಿ ಮೇಲೆ ಲೈಂಗಿಕ ದೌರ್ಜನ್ಯ, ಹಲ್ಲೆ ಆರೋಪ ಕೇಳಿಬಂದಿದೆ. ಈ ಹಿನ್ನೆಲೆಯಲ್ಲಿ ಬೆಂಗಳೂರಿನ ಆರ್.ಆರ್ ನಗರ ಠಾಣೆ ಪೊಲೀಸರು ಬಂಧಿಸಿದ್ದಾರೆ.

ಚರಿತ್ ಬಾಳಪ್ಪ, ಈಗಾಗಲೇ ವಿವಾಹವಾಗಿ ಪತ್ನಿಯಿಂದ ವಿಚ್ಛೇದನ ಪಡೆದಿದ್ದಾರೆ. ಆದರೆ ಪತ್ನಿಗೆ ನೀಡಬೇಕಾಗಿರುವ ಜೀವನಾಂಶವನ್ನು ನೀಡದೇ ಸತಾಯಿಸುತ್ತಿದ್ದು, ಈ ಬಗ್ಗೆ ಪತ್ನಿ ಕೂಡ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದು, ಕೋರ್ಟ್ ಮೆಟ್ಟಿಲೇರಿದ್ದಾರೆ.

ಈ ನಡುವೆ ಚರಿತ್ ಬಾಳಪ್ಪ ಇನ್ನೋರ್ವ ಯುವತಿಯೊಂದಿಗೆ ಸ್ನೇಹ ಬೆಳೆಸಿ, ಆಕೆಯನ್ನು ಮದುವೆಯಾಗುವುದಾಗಿ ಹೇಳಿ ನಂಬಿಸಿ ಪ್ರೀತಿ-ಪ್ರೇಮ ಎಂದು ಲೈಂಗಿಕ ದೌರ್ಜನ್ಯವೆಸಗಿದ್ದಲ್ಲದೇ, ಆಕೆಯ ಮೇಲೆ ಹಲ್ಲೆ ನಡೆಸಿದ್ದಾಗಿ ಯುವತಿ ದೂರು ದಾಖಲಿಸಿದ್ದಾರೆ. ಅಲ್ಲದೇ ಯುವತಿ ಮೇಲೆ ಹಲ್ಲೆ ನಡೆಸಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.

ಪ್ರಕರಣ ದಾಖಲಿಸಿಕೊಂಡಿರುವ ಆರ್.ಆರ್.ನಗರ ಠಾಣೆ ಪೊಲೀಸರು ನಟ ಚರಿತ್ ನನ್ನು ಬಂಧಿಸಿದ್ದಾರೆ.

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button