Latest

*ಲೋಕಾಯುಕ್ತ ಬಲೆಗೆ ಬಿದ್ದ ನಗರ ಸಭೆ ಆಯುಕ್ತ*

ಪ್ರಗತಿವಾಹಿನಿ‌ ಸುದ್ದಿ : 2 ಲಕ್ಷ ರೂಪಾಯಿ ಲಂಚ ಸ್ವೀಕರಿಸುತ್ತಿದ್ದ ವೇಳೆ ದಾವಣಗೆರೆ ಜಿಲ್ಲೆಯ ಹರಿಹರ ತಾಲೂಕಿನ ನಗರ ಸಭೆ ಆಯುಕ್ತ ಬಸವರಾಜ್ ಐಗೂರು ಎಂಬುವವರು ಲೋಕಾಯುಕ್ತ ಅಧಿಕಾರಿಗಳಿಗೆ ರೆಡ್ ಹ್ಯಾಂಡ್ ಆಗಿ ಲಾಕ್ ಆಗಿದ್ದಾರೆ ಎಂದು ವರದಿಯಾಗಿದೆ.

Home add -Advt

ಸಾಮಗ್ರಿ ಸರಬರಾಜು ಮಾಡುವ ಗುತ್ತಿಗೆದಾರನಿಂದ ಲಂಚ ಪಡೆಯುವ ಬಗ್ಗೆ ಖಚಿತ ಮಾಹಿತಿ ಮೇರೆಗೆ ರೇಡ್ ಮಾಡಿದ ಲೋಕಾಯುಕ್ತ ಅಧಿಕಾರಿಗಳು, ಬಸವರಾಜ್ ನನ್ನು ವಶಕ್ಕೆ ಪಡೆದಿದ್ದಾರೆ.

ಗುತ್ತಿಗೆದಾರನಿಂದ ಹರಿಹರದ ವಿದ್ಯಾನಗರದಲ್ಲಿರುವ ಮನೆಯಲ್ಲಿ ಲಂಚ ಪಡೆಯುತ್ತಿದ್ದಾಗ ಲೋಕಾಯುಕ್ತ ಪೊಲೀಸರು ಈ ದಾಳಿ ನಡೆಸಿದ್ದಾರೆ ಎಂದು ತಿಳಿದುಬಂದಿದೆ. ಲೋಕಾಯುಕ್ತ ಎಸ್ಪಿ ಎಂಎಸ್ ಕಮಲಾಪುರ ನೇತೃತ್ವದಲ್ಲಿ ರೇಡ್ ಮಾಡಲಾಗಿದೆ.

Related Articles

Back to top button