Latest

24 ಗಂಟೆಯಲ್ಲಿ ಬರೋಬ್ಬರಿ 10,956 ಜನರಲ್ಲಿ ಸೋಂಕು ಪತ್ತೆ

ಪ್ರಗತಿವಾಹಿನಿ ಸುದ್ದಿ; ನವದೆಹಲಿ: ಭಾರತದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ತೀವ್ರವಾಗಿ ಹೆಚ್ಚುತ್ತಿದ್ದು, ಕಳೆದ 24 ಗಂಟೆಯಲ್ಲಿ ಬರೋಬ್ಬರಿ 10,956 ಮಂದಿಯಲ್ಲಿ ಮಹಾಮಾರಿ ಕೊರೊನಾ ವೈರಸ್ ದೃಢಪಟ್ಟಿದೆ.

ಲಾಕ್‍ಡೌನ್ ಸಡಿಲಗೊಳಿಸಿದ ಬೆನ್ನಲ್ಲೇ ದೇಶದಲ್ಲಿ ಸೋಂಕಿತರ ಸಂಖ್ಯೆ ಏರಿಕೆಯಾಗುತ್ತಲೇ ಇದೆ. ದೇಶದಲ್ಲಿ ಸೋಂಕಿತರ ಸಂಖ್ಯೆ 2,97,535ಕ್ಕೆ ಏರಿಕೆಯಾಗಿದೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಇಂದು ಮಾಹಿತಿ ನೀಡಿದೆ.

Home add -Advt

ಕಳೆದ 24 ಗಂಟೆಗಳಲ್ಲಿ ಕೊರೊನಾ ಸೋಂಕಿನಿಂದಾಗಿ ಭಾರತ ದೇಶದಲ್ಲಿ 396 ಮಂದಿ ಮೃತಪಟ್ಟಿದ್ದಾರೆ. ಈ ಮೂಲಕ ಮಹಾಮಾರಿ ವೈರಸ್‍ಗೆ ಬಲಿಯಾದವರ ಸಂಖ್ಯೆ ಕೂಡ 8,498ಕ್ಕೆ ಏರಿಕೆಯಾಗಿದೆ. 2,97,535 ಕೊರೊನಾ ಸೋಂಕಿತರ ಪೈಕಿ 1,47,195 ಮಂದಿ ಸೋಂಕಿನಿಂದ ಗುಣಮುಖರಾಗಿದ್ದಾರೆ. ಪ್ರಸ್ತುತ ದೇಶದಲ್ಲಿ 1,41,842 ಮಂದಿ ಸೋಂಕಿನಿಂದ ಬಳಲುತ್ತಿದ್ದಾರೆ.

Related Articles

Back to top button