Kannada NewsKarnataka NewsLatestNational

*ನಟ ದರ್ಶನ ಅರೆಸ್ಟ್: ಪೊಲೀಸ್ ಆಯುಕ್ತರ ತುರ್ತು ಸುದ್ದಿಗೋಷ್ಠಿ*

ಪ್ರಗತಿವಾಹಿನಿ ಸುದ್ದಿ: ಜೂನ್ 8 ರಂದು ಚಿತ್ರದುರ್ಗ ಮೂಲದ ರೇಣುಕಾಸ್ವಾಮಿ ಎಂಬ ವ್ಯಕ್ತಿಯ ಕೊಲೆ ಆರೋಪದ ಮೇಲೆ ನಟ ದರ್ಶನ್ ಸೇರಿದಂತೆ 10 ಮಂದಿಯನ್ನು ಬಂಧಿಸಲಾಗಿದೆ ಎಂದು ಬೆಂಗಳೂರು ಪೊಲೀಸ್ ಆಯುಕ್ತ ಬಿ.ದಯಾನಂದ ತಿಳಿಸಿದ್ದಾರೆ.

ತುರ್ತುಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ರೇಣುಕಾ ಸ್ವಾಮಿ ದರ್ಶನ್ ಪತ್ನಿಗೆ ಅವಾಚ್ಯ ಸಂದೇಶಗಳನ್ನು ಕಳುಸಿದ್ದಾನೆ ಎಂಬ ಕಾರಣಕ್ಕೆ ಆತನ ಕೊಲೆ ಮಾಡಲಾಗಿದೆ ಎಂಬುದು ಪ್ರಾಥಮಿಕ ತನಿಖೆಯಲ್ಲಿ ತಿಳಿದುಬಂದಿದೆ ಎಂದಿದ್ದಾರೆಂದು ತಿಳಿದರು.

ಈವರೆಗೆ ಸುಮಾರು 10ಕ್ಕೂ ಹೆಚ್ಚು ಜನರನ್ನು ವಶಕ್ಕೆ ಪಡೆಯಲಾಗಿದ್ದು, ಪ್ರಶ್ನೋತ್ತರ ನಡೆಯುತ್ತಿದೆ. ಮುಂದಿನ ಕಾನೂನು ಕ್ರಮಗಳನ್ನು ನಡೆಸಲಾಗುತ್ತದೆ. ತನಿಖೆಯ ಆರಂಭಿಕ ಹಂತದಲ್ಲಿ ಇರುವ ಕಾರಣ ಪ್ರಕರಣದ ಬಗೆಗೆ ಈಗ ಹೆಚ್ಚಿನ ವಿವರಗಳನ್ನು ಹಂಚಿಕೊಳ್ಳಲು ಆಗುವುದಿಲ್ಲ ಎಂದು ಹೇಳಿದ್ದಾರೆ.‌

Home add -Advt

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button