Film & Entertainment
ನಟ ದರ್ಶನ್ ಗ್ಯಾಂಗ್ ಮತ್ತೆ ಪೊಲೀಸ್ ಕಸ್ಟಡಿಗೆ

ಪ್ರಗತಿವಾಹಿನಿ ಸುದ್ದಿ: ಚಿತ್ರದುರ್ಗ ಮೂಲದ ರೇಣುಕಾಸ್ವಾಮಿ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಟ ದರ್ಶನ್ & ಗ್ಯಾಂಗ್ ನ್ನು ಮತ್ತೆ ಪೊಲೀಸ್ ಕಸ್ಟಡಿಗೆ ನೀಡಿ ಕೋರ್ಟ್ ಆದೇಶ ಹೊರಡಿಸಿದೆ.
ಕೊಲೆ ಕೇಸ್ ನಲ್ಲಿ ಬಂಧನಕ್ಕೀಡಾಗಿರುವ ನಟ ದರ್ಶನ್ ಸೇರಿದಂತೆ 14 ಆರೋಪಿಗಳ ಕಸ್ಟಡಿ ಅವಧಿ ಇಂದು ಮುಕ್ತಾಯವಾದ ಹಿನ್ನೆಲೆಯಲ್ಲಿ ಬೆಂಗಳೂರಿನ ಅನ್ನಪೂರ್ಣೇಶ್ವರಿ ನಗರ ಠಾಣೆ ಪೊಲೀಸರು ಕೋರ್ಟ್ ಗೆ ಹಾಜರುಪಡಿಸಿದ್ದರು. ಈ ವೇಳೆ ಹೆಚ್ಚಿನ ವಿಚಾರಣೆಗಾಗಿ ಆರೋಪಿಗಳನ್ನು 9 ದಿನಗಳ ಕಾಲ ಕಸ್ಟಡಿಗೆ ನೀಡುವಂತೆ ಪೊಲೀಸರು ಮನವಿ ಮಾಡಿದರು.
ಪೊಲೀಸರ ಮನವಿ ಆಲಿಸಿದ ಆರ್ಥಿಕ ಅಪರಾಧಗಳ ವಿಶೇಷ ನ್ಯಾಯಾಲಯ, ನಟ ದರ್ಶನ್ & ಗ್ಯಾಂಗ್ ನ್ನು ಮತ್ತೆ 5 ದಿನಗಳ ಕಾಲ ಜೂನ್ 20ರವರೆಗೆ ಪೊಲೀಸ್ ಕಸ್ಟಡಿಗೆ ನೀಡಿ ಆದೇಶ ಹೊರಡಿಸಿದೆ.




