Belagavi NewsBelgaum NewsKannada NewsKarnataka NewsNationalPolitics

*ನಟ ದರ್ಶನ ಹಿಂಡಲಗಾ ಕೇಂದ್ರ ಕಾರಾಗೃಹಕ್ಕೆ ಸ್ಥಳಾಂತರಕ್ಕೆ ಚಿಂತನೆ: ಸಿಎಂ ಸಿದ್ದರಾಮಯ್ಯ*

ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಪರಪ್ಪನ ಅಗ್ರಹಾರದಲ್ಲಿರುವ ಆರೋಪಿ ನಟ ದರ್ಶನಗೆ ರಾಜಾತಿಥ್ಯ ‌ ನೀಡಲು ಅನುಮತಿ ನೀಡಿರುವ ಏಳು ಜನ ಸಿಬ್ಬಂದಿಗಳನ್ನು ಅಮಾನತ್ತು ಮಾಡಲಾಗಿದೆ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ.

ಇಂದು ಬೆಳಗಾವಿ ವಿಮಾನ ನಿಲ್ದಾಣದಲ್ಲಿ ಮಾಧ್ಯಮಗಳ ಜೊತೆ ಮಾತನಾಡಿದ ಅವರು, ನಟ ದರ್ಶನ ಅವರನ್ನು ಹಿಂಡಲಗಾ ಕೇಂದ್ರ ಕಾರಾಗೃಹಕ್ಕೆ ಸ್ಥಳಾಂತರ ಮಾಡುವ ಚಿಂತನೆಯನ್ನು ಅಧಿಕಾರಿಗಳು ನಡೆಸಿದ್ದಾರೆ. ಪರಪ್ಪನ ಅಗ್ರಹಾರಕ್ಕೆ ತೆರಳಿರುವ ಗೃಹ ಸಚಿವ ಪರಮೇಶ್ವರ ಅವರು ದರ್ಶನಗೆ ರಾಜಾತಿಥ್ಯ ನೀಡಲುಬಿಟ್ಟ ಹಿರಿಯ ಅಧಿಕಾರಿಗಳ ಮೇಲೂ ಕ್ರಮ ಜರುಗಿಸಲು ಇಂದು ಸಭೆ ನಡೆಸಿ ಕ್ರಮ ಜರುಗಿಸುತ್ತಾರೆ ಎಂದು ತಿಳಿಸಿದರು.

ಕೇಂದ್ರ ಸಚಿವ ಪ್ರಲ್ಹಾದ ಜೋಶಿ ದುಡ್ಡು ಇದ್ದವರಿಗೆ ಜೈಲಿನಲ್ಲಿ ಐಷಾರಾಮಿ ಜೀವನ ನಡೆಸಲು ಸರಕಾರ ಬಿಡುತ್ತಿದೆ ಎಂದು ಆರೋಪಕ್ಕೆ ಉತ್ತರಿಸಿದ ಅವರು, ಅವರು ಯಾರ ಪರ ಇದ್ದಾರೆ. ಅವರು ಬಡವರಿಗೆ ಏನು ಮಾಡಿದ್ದಾರೆ ಅವರಿಗೆ ನಮ್ಮ ಸರಕಾರದ ಬಗ್ಗೆ ಮಾತನಾಡುವ ನೈತಿಕತೆ ಜೋಶಿಗೆ ಇಲ್ಲ ಎಂದು ಗರಂ ಆದರು.‌

ಜಿಲ್ಲಾ ಉಸ್ತುವಾರಿ ಸಚಿವ ಸತೀಶ್ ಜಾರಕಿಹೊಳಿ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್, ಶಾಸಕರಾದ ಆಸೀಫ್ ಸೇಠ್, ಬಾಬಾಸಾಹೇಬ್ ಪಾಟೀಲ್, ವಿಶ್ವಾಸ ವೈದ್ಯ, ಅಶೋಕ ಪಟ್ಟಣ, ಗಣೇಶ ಹುಕ್ಕೇರಿ, ಮಹಾಂತೇಶ ಕೌಜಲಗಿ, ಚನ್ನರಾಜ ಹಟ್ಟಿಹೊಳಿ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button