Film & EntertainmentKannada NewsKarnataka NewsLatest

*ನಟ ದರ್ಶನ್ ಮನೆ ಮೇಲೆ ಅರಣ್ಯಾಧಿಕಾರಿಗಳ ದಾಳಿ*

ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಹುಲಿ ಉಗುರು ಧರಿಸಿರುವ ಆರೋಪದ ಹಿನ್ನೆಲೆಯಲ್ಲಿ ಅರಣ್ಯಾಧಿಕಾರಿಗಳು ಚಾಲೇಂಜಿಂಗ್ ಸ್ಟಾರ್ ದರ್ಶನ್ ಮನೆ ಮೇಲೆ ದಾಳಿ ನಡೆಸಿದ್ದಾರೆ.

ಹುಲಿ ಉಗುರು ಧರಿಸಿದ್ದ ಹಿನ್ನೆಲೆಯಲ್ಲಿ ಬಿಗ್ ಬಾಸ್ ಸ್ಪರ್ಧಿ ವರ್ತೂರು ಸಂತೋಷ್ ಬಂಧನ ಬೆನ್ನಲ್ಲೇ ಹುಲಿ ಉಗುರು ಪೆಂಡೆಂಟ್ ಧರಿಸಿದ್ದ ನಟ ದರ್ಶನ್, ಜಗ್ಗೇಶ್, ನಿರ್ಮಾಪಕ ರಾಕ್ ಲೈನ್ ವೆಂಕಟೇಶ್, ನಿಖಿಲ್ ಕುಮಾರಸ್ವಾಮಿ ಸೇರಿದಂತೆ ಹಲವರಿಗೆ ಸಂಕಷ್ಟ ಎದುರಾಗಿದೆ.

Home add -Advt

ಹುಲಿ ಉಗುರು ಧರಿಸಿರುವ ಆರೋಪದಲ್ಲಿ ನಟರಾದ ದರ್ಶನ್, ಜಗ್ಗೇಶ್, ರಾಕ್ ಲೈನ್ ವೆಂಕಟೇಶ್ ವಿರುದ್ಧ ದೂರು ದಾಖಲಾಗಿದೆ. ಈ ಹಿನ್ನೆಲೆಯಲ್ಲಿ ಅರಣ್ಯಧಿಕಾರಿಗಳು ನಾಲ್ಕು ತಂಡ ರಚನೆ ಮಾಡಿ ದೂರು ದಾಖಲಾದವರ ವಿರುದ್ಧ ಪರಿಶೀಲನೆ ನಡೆಸಿದ್ದಾರೆ.

ಈ ನಿಟ್ಟಿನಲ್ಲಿ ಇಂದು ನತ ದರ್ಶನ್ ಅವರ ಆರ್. ಆರ್. ನಗರದ ಮನೆ ಮೇಲೆ ದಾಳಿ ನಡೆಸಿದ ಅರಣ್ಯಾಧಿಕಾರಿಗಳು ಮನೆಯಲ್ಲಿ ಪರಿಶೀಲನೆ ನಡೆಸಿದ್ದಾರೆ.

Related Articles

Back to top button