
ಪ್ರಗತಿವಾಹಿನಿ ಸುದ್ದಿ: ‘ಕನ್ನಡತಿ’ ಧಾರಾವಾಹಿ ಖ್ಯಾತಿಯ ನಟ ಕಿರಣ್ ರಾಜ್ ಅವರ ಕಾರು ಅಪಘಾತಕ್ಕೀದಾಗಿದ್ದು, ನಾ ಗಂಭೀರವಾಗಿ ಗಾಯಗೊಂಡಿರುವ ಘಟನೆ ಬೆಂಗಳೂರಿನ ಕೆಂಗೇರಿ ಬಳಿ ನಡೆದಿದೆ.
ಮುದ್ದರಾಯನಪಾಳ್ಯ ವೃದ್ಧಾಶ್ರಕ್ಕೆ ಹೋಗಿ ಬರುತ್ತಿದ್ದ ವೇಳೆ ಕಿರಣ್ ರಾಜ್ ಅವರ ಕಾರು ಅಪಘಾತಕ್ಕೀಡಾಗಿದೆ. ಎಕ್ಸಿಕುಟಿವ್ ಪ್ರೊಡ್ಯೂಸರ್ ಗಿರೀಶ್ ಕಾರು ಚಲಾಯಿಸುತ್ತಿದ್ದರು. ಈ ವೇಳೆ ನಿಯಂತ್ರಣ ತಪ್ಪಿದ ಕಾರು ಕಂಬಕ್ಕೆ ಡಿಕ್ಕಿ ಹೊಡೆದಿದೆ.
ಅಪಘಾತದಲ್ಲಿ ಕಿರಣ್ ರಾಜ್ ಅವರ ಎದೆಯ ಭಾಗಕ್ಕೆ ಗಂಭೀರವಾದ ಗಾಯವಾಗಿದ್ದು, ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಕಿರಣ್ ರಾಜ್ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಆದರೆ ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ಮುಂದುವರೆದಿದೆ ಎಂದು ತಿಳಿದುಬಂದಿದೆ.
ಕಿರುತೆರೆಯ ಕನ್ನಡತಿ ಧಾರವಾಹಿ ಮೂಲಕ ಜನಪ್ರಿಯತೆ ಪಡೆದಿದ್ದ ನಟ ಕಿರಣ್ ರಾಜ್ ಅಭಿನಯದ ‘ರಾನಿ’ ಸಿನಿಮಾ ಇದೇ ವಾರ ತೆರೆಕಾಣಲು ಸಜ್ಜಾಗಿದೆ.