
ಪ್ರಗತಿವಾಹಿನಿ ಸುದ್ದಿ: ಬಾಲಿವುಡ್ ಖ್ಯಾತ ನಟಿ, ಮಾಡೆಲ್ ಮಲೈಕಾ ಅರೋರಾ ತಂದೆ ಅನಿಲ್ ಅರೋರಾ ಮುಂಬೈನ ಬಾಂದ್ರಾದಲ್ಲಿ ಆತ್ಮಹತ್ಯೆಗೆ ಶರಣಾಗಿದ್ದಾರೆ.
ಬಾಂದ್ರಾದಲ್ಲಿರುವ ತಮ್ಮ ಮನೆಯ ಕಟ್ಟಡದ 6ನೇ ಮಹಡಿಯಿಂದ ಜಿಗಿದು ಅನಿಲ್ ಅರೋರಾ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಇಂದು ಬೆಳಿಗ್ಗೆ 9 ಗಂಟೆ ಸುಮಾರಿಗೆ ಅನಿಲ್ ಅರೋರಾ ಆತ್ಮಹತ್ಯೆಗೆ ಶರಣಾಗಿದ್ದಾರೆ ಎಂದು ತಿಳಿದುಬಂದಿದೆ.
ಅನಿಲ್ ಅರೋರಾ ದುಡುಕಿನ ನಿರ್ಧಾರಕ್ಕೆ ನಿಖರ ಕಾರಣ ತಿಳಿದುಬಂದಿಲ್ಲ. ಆದರೆ ಅವರು ಕೆಲ ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದರು ಎನ್ನಲಾಗಿದೆ. ಘಟನಾ ಸ್ಥಳಕ್ಕೆ ಬಾಂದ್ರಾ ಪೊಲೀಸರು ಭೇಟಿ ನೀಡಿದ್ದು, ಪರಿಶೀಲನೆ ನಡೆಸಿದ್ದಾರೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ