Film & EntertainmentKannada NewsKarnataka NewsLatest
*ನಟ ನಾಗಭೂಷಣ್ ಸ್ಟೇಷನ್ ಬೇಲ್ ಮೇಲೆ ಬಿಡುಗಡೆ*

ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಕಾರು ಅಪಘಾತದಲ್ಲಿ ಮಹಿಳೆ ಸಾವನ್ನಪ್ಪಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಸ್ಯಾಂಡಲ್ ವುಡ್ ನಟ ನಾಗಭೂಷಣ್ ಅವರನ್ನು ಬಂಧಿಸಿ, ಸ್ಟೇಷನ್ ಬೇಲ್ ಮೇಲೆ ಬಿಡುಗಡೆ ಮಾಡಲಾಗಿದೆ.
ಈ ಕುರಿತು ಡಿಸಿಪಿ ಶಿವಪ್ರಕಾಶ್ ದೇವರಾಜ್ ಮಾಹಿತಿ ನೀಡಿದ್ದು, ಅತಿವೇಗ ಹಾಗೂ ನಿರ್ಲಕ್ಷತೆಯಿಂದ ನಟ ನಾಗಭೂಷಣ್ ಕಾರು ಚಲಾಯಿಸಿದ್ದು ಅಪಘಾತಕ್ಕೆ ಕಾರಣವಾಗಿದೆ. ಅಪಘಾತದಲ್ಲಿ ಮಹಿಳೆ ಸಾವನ್ನಪ್ಪಿದ್ದು, ಮಹಿಳೆಯ ಪತಿ ಗಂಭೀರವಾಗಿ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದಾರೆ ಎಂದರು.
ಘಟನೆಗೆ ಸಂಬಂಧಿಸಿದಂತೆ ಫಿಲ್ಮ್ ಆಕ್ಟರ್ ನಾಗಭೂಷಣ್ ಅವರನ್ನು ಬಂಧಿಸಿ ಸ್ಟೇಷನ್ ಬೇಲ್ ಮೇಲೆ ಬಿಡುಗಡೆ ಮಾಡಲಾಗಿದೆ. ಮುಂದಿನ ವಿಚಾರಣೆಗೆ ಮತ್ತೆ ಕರೆಯಲಾಗುತ್ತದೆ ಎಂದು ತಿಳಿಸಿದ್ದಾರೆ.




