Film & EntertainmentKannada NewsKarnataka NewsLatest

*ನಟ ನಾಗಭೂಷಣ್ ಗೆ ಮತ್ತೆ ಎದುರಾಯ್ತು ಸಂಕಷ್ಟ*

ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಅಪಘಾತ ಪ್ರಕರಣದಲ್ಲಿ ಸ್ಟೇಷನ್ ಬೇಲ್ ಮೇಲೆ ಬಿಡುಗಡೆಯಾಗಿದ್ದ ಸ್ಯಾಂಡಲ್ ವುಡ್ ನಟ ನಾಗಭೂಷಣ್ ಗೆ ಮತ್ತೆ ಸಂಕಷ್ಟ ಎದುರಾಗಿದೆ.

ನಾಳೆ ಅ.3ರಂದು ವಿಚಾರಣೆಗೆ ಹಾಜರಾಗುವಂತೆ ಕುಮರಸ್ವಾಮಿ ಲೇಔಟ್ ಸಂಚಾರಿ ಠಾಣೆ ಪೊಲೀಸರು ನಾಗಭೂಷಣ್ ಗೆ ನೋಟಿಸ್ ನೀಡಿದ್ದಾರೆ.

ಸೆ.30ರಂದು ರಾತ್ರಿ ಬೆಣ್ಗಳೂರಿನ ಕನಕಪುರ ರಸ್ತೆಯಲ್ಲಿ ನಟ ನಾಗಭೂಷಣ್ ಅವರ ಕಾರು ದಂಪತಿಗೆ ಡಿಕ್ಕಿ ಹೊಡೆದಿತ್ತು. ಮಹಿಳೆ ಪ್ರೇಮಾ ಸ್ಥಳದಲ್ಲೇ ಸಾವನ್ನಪ್ಪಿದ್ದರು. ಅವರ ಪತಿ ಕೃಷ್ಣ ಗಂಭೀರವಾಗಿ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದರು.

ಪ್ರಕರಣ ಸಂಬಂಧ ನಟ ನಾಗಭೂಷಣ್ ಅವರನ್ನು ಬಂಧಿಸಿದ್ದ ಕುಮರಸ್ವಾಮಿ ಲೇಔಟ್ ಸಂಚಾರಿ ಠಾಣೆ ಪೊಲೀಸರು ಸ್ಟೇಷನ್ ಬೇಲ್ ಮೇಲೆ ಬಿಡುಗಡೆ ಮಾಡಿದ್ದರು. ನಾಗಭೂಷಣ್ ವಿರುದ್ಧ ಐಪಿಸಿ ಸೆಕ್ಷನ್ 279ರ ಅಡಿ ಕೇಸ್ ದಾಖಲಾಗಿದೆ. ಈ ಹಿನ್ನೆಲೆಯಲ್ಲಿ ಕುಮಾರಸ್ವಾಮಿ ಲೇಔಟ್ ಪೊಲೀಸರು ನಾಳೆ ವಿಚಾರಣೆಗೆ ಹಾಜರಾಗುವಂತೆ ನಾಗಭೂಷಣ್ ಗೆ ನೋಟಿಸ್ ನೀಡಿದ್ದಾರೆ.

Home add -Advt


Related Articles

Back to top button