EducationFilm & EntertainmentKannada NewsNational

*ವಿದ್ಯಾರ್ಥಿಗಳ ಹೋರಾಟಕ್ಕೆ ನಟ ಸಲ್ಮಾನ್ ಖಾನ್ ಬೆಂಬಲ*

ಪ್ರಗತಿವಾಹಿನಿ ಸುದ್ದಿ: ಪ್ರಶ್ನೆ ಪತ್ರಿಕೆ ಸೋರಿಕೆ ವಿರುದ್ಧ ದೆಹಲಿಯ ಜಂತರ ಮಂತರನಲ್ಲಿ ವಿದ್ಯಾರ್ಥಿಗಳು ಮಾಡುತ್ತಿರುವ ಹೋರಾಟಕ್ಕೆ ಬಾಲಿವುಡ್‌ ನಟ ಸಲ್ಮಾನ್ ಖಾನ್ ಬೆಂಬಲ ಸೂಚಿಸಿದ್ದಾರೆ.

ಈ ಬಗ್ಗೆ ತಮ್ಮ ಇನ್‌ಸ್ಟಾಗ್ರಾಂನಲ್ಲಿ ಪೋಸ್ಟ್ ಹಂಚಿಕೊಂಡಿರುವ ಅವರು, ಶಾಂತಿಯುವ ಪ್ರತಿಭಟನೆ ನಡೆಸಿದ ವಿದ್ಯಾರ್ಥಿಗಳನ್ನು ಶ್ಲಾಘಿಸಿದ್ದಾರೆ. 

Home add -Advt

ಅದೊಂದು ಶಾಂತಿಯುತ ಚಳವಳಿಯಾಗಿತ್ತು. ಆದರೆ, ಚಳವಳಿ ಹಿಂಸಾತ್ಮಕ ರೂಪ ಪಡೆದುಕೊಂಡಿದ್ದಕ್ಕೆ ಬೇಸರವಿದೆ. ಗಾಯಗೊಂಡ ವಿದ್ಯಾರ್ಥಿಗಳು ಮತ್ತು ಅವರ ಕುಟುಂಬಗಳ ಬಗ್ಗೆ ಸಹಾನುಭೂತಿ ಹೊಂದಿದ್ದೇನೆ. ಶಿಕ್ಷಣ ವ್ಯವಸ್ಥೆಯಲ್ಲಿ ಪಾರದರ್ಶಕತೆಗಾಗಿ ಹೋರಾಡುತ್ತಿರುವ ವಿದ್ಯಾರ್ಥಿಗಳು ಮತ್ತು ಅದಕ್ಕೆ ಬೆಂಬಲ ನೀಡುತ್ತಿರುವ ಅವರ ಪೋಷಕರನ್ನು ಕಂಡು ಸಂತೋಷವಾಗಿದೆ’ ಎಂದು ಹೇಳಿದ್ದಾರೆ.

ವಿದ್ಯಾರ್ಥಿಗಳು ತೆಗೆದುಕೊಂಡಿರುವ ನಿಲುವು ಸರಿಯಾಗಿದೆ. ಇದು ಅವರಿಗೆ ದೇಶದ ಬಗೆಗಿರುವ ಕಾಳಜಿಯನ್ನು ತೋರಿಸುತ್ತದೆ. ಪ್ರತಿಭಟನೆ ಅವರಿಗಿದ್ದ ಕೊನೆಯ ಆಯ್ಕೆಯಾಗಿದ್ದು, ಅದನ್ನು ಶಾಂತಿಯುತವಾಗಿ ಮಾಡಿದ್ದಾರೆ. ಈ ವಿದ್ಯಾರ್ಥಿಗಳು ಅತ್ಯಂತ ಧೈರ್ಯಶಾಲಿಗಳಾಗಿದ್ದು ನಿಜವಾದ ಧೀರರು. ಶಿಕ್ಷಣದ ಕಡೆಗೆ ಹೆಚ್ಚಿನ ಆಸಕ್ತಿ ಮತ್ತು ಹಂಬಲ ಹೊಂದಿರುವ ಈ ಪೀಳಿಗೆಯು ಭಾರತವು ಹೆಮ್ಮೆ ಪಡುವಂತೆ ಮಾಡುತ್ತದೆ’ ಎಂದು ತಿಳಿಸಿದ್ದಾರೆ.

Related Articles

Back to top button