Kannada NewsKarnataka NewsLatest

*ಮಾಜಿ ಐಪಿಎಸ್ ಅಧಿಕಾರಿ ಭಾಸ್ಕರ್ ರಾವ್, ನಟ ದುನಿಯಾ ವಿಜಯ್ ಗೆ ಸಂಕಷ್ಟ*

ಪ್ರಗತಿವಾಹಿನಿ ಸುದ್ದಿ: ಝೊಂಬಿ ಡ್ರಗ್ಸ್ ಸೇವಿಸಿದ್ದಾನೆಂಬ ತಪ್ಪು ಮಾಹಿತಿಯ ವಿಡಿಯೋ ವೈರಲ್ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಐಪಿಎಸ್ ಅಧಿಕಾರಿ ಭಾಸ್ಕರ್ ರಾವ್ ಹಾಗೂ ನಟ ದುನಿಯಾ ವಿಜಯ್ ಅವರಿಗೆ ಸಂಕಷ್ಟ ಎದುರಾಗಿದೆ.

ಅನಾರೋಗ್ಯದಿಂದ ನಡೆಯಲು ಆಗದ ಸ್ಥಿತಿಯಲ್ಲಿದ್ದ ವ್ಯಕ್ತಿಯೊಬ್ಬ ರಸ್ತೆಯಲ್ಲಿ ವಿಚಿತ್ರವಾಗಿ ವರ್ತಿಸುತ್ತಿದನ್ನು ಕಂಡು ಝೊಂಬಿ ಡ್ರಗ್ಸ್ ಸೇವಿಸಿ ಅನುಮಾನಾಸ್ಪದವಾಗಿ ವರ್ತಿಸುತ್ತಿದ್ದಾರೆ ಎಂದು ವಿಡಿಯೋ ಅಪ್ ಲೋಡ್ ಮಾಡಿ ವೈರಲ್ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಐಪಿಎಸ್ ಅಧಿಕಾರಿ ಭಾಸ್ಕರ್ ರಾವ್ ಹಾಗೂ ನಟ ದುನಿಯಾ ವಿಜಯ್ ಅವರಿಗೆ ಬಾಗಲೂರು ಪೊಲೀಸರು ನೋಟಿಸ್ ಜಾರಿ ಮಾಡಲು ಮುಂದಾಗಿದ್ದಾರೆ.

ವಿಡಿಯೋ ಅಪ್ ಲೋಡ್ ಮಾಡಿದರ ಬಗ್ಗೆ ಕಾರಣ ಕೇಳಿ ವಿವರಿಸುವಂತೆ ಸೂಚಿಸಿ ನೋಟಿಸ್ ನೀಡಲು ಸಿದ್ಧತೆ ನಡೆಸಿದ್ದಾರೆ.

ಕೆಲ ದಿನಗಳ ಹಿಂದೆ ಝೊಂಬಿ ಡ್ರಗ್ಸ್ ಸೇವಿಸಿದ್ದಾನೆ ಎಂಬ ತಪ್ಪು ಮಾಹಿತಿಯೊಂದಿಗೆ ವಿಡಿಯೊವನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದ ವಿದ್ಯಾರಣ್ಯಪುರ ನಿವಾಸಿ ಹೇಮಂತ್ ಎಂಬಾತನ್ನು ಪೊಲೀಸರು ಬಂಧಿಸಿದ್ದರು.


Related Articles

Back to top button