LatestUncategorized

*ಖ್ಯಾತ ಕಿರುತೆರೆ ನಟ ಆತ್ಮಹತ್ಯೆಗೆ ಶರಣು*

ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಕಿರುತೆರೆಯ ಖ್ಯಾತ ನಟ ಸಂಪತ್ ಜಯರಾಮ್ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಬೆಂಗಳೂರಿನ ನೆಲಮಂಗಲದಲ್ಲಿ ನಡೆದಿದೆ.

Home add -Advt

ನೆಲಮಂಗಲದ ಅರಿಶಿನಕುಂಟೆ ಮನೆಯಲ್ಲಿ ನಟ ಸಂಪತ್ ಜಯರಾಮ್ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. 35 ವರ್ಷದ ಸಂಪತ್ ಜಯರಾಮ್ ಅವಕಾಶಗಳಿಲ್ಲದೇ ಬೇಸತ್ತಿದ್ದರು ಎನ್ನಲಾಗಿದೆ.

ಹಲವು ಸಿನಿಮಾ, ಧಾರಾವಾಹಿಗಳಲ್ಲಿ ಅಭಿನಯಿಸಿದ್ದ ಸಂಪತ್ ಜಯರಾಮ್ ಇತ್ತೀಚಿನ ದಿನಗಳಲ್ಲಿ ಯಾವುದೇ ಆಫರ್ ಗಳಿಲ್ಲದೇ ನೊಂದಿದ್ದರು. ಇದೇ ಕಾರಣಕ್ಕೆ ಮನನೊಂದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾಗಿದೆ.

ಸಂಪತ್ ಜಯರಾಮ್ ಒಂದು ವರ್ಷದ ಹಿಂದಷ್ಟೇ ವೈವಾಹಿಕ ಜೀವನಕ್ಕೆ ಕಾಲಿಟ್ಟಿದ್ದರು. ಈಗ ಆತ್ಮಹತ್ಯೆ ಮಾಡಿಕೊಂಡಿದ್ದು, ಪತ್ನಿ ಹಾಗೂ ಕುಟುಂಬಸ್ಥರು ಆಘಾತಕ್ಕೀಡಾಗಿದ್ದಾರೆ.

ನೆಲಮಂಗಲ ಟೌನ್ ಪೊಲೀಸ್ ಠಾಣೆಯ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

https://pragati.taskdun.com/karnatakarain-updateimd-6/


Related Articles

Back to top button