Kannada NewsKarnataka NewsLatest
ನಾಳೆ ಲಕ್ಷ್ಮೀ ಹೆಬ್ಬಾಳಕರ ಪರ ಪ್ರಚಾರಕ್ಕೆ ಆಗಮಿಸಲಿದ್ದಾರೆ ಹ್ಯಾಟ್ರಿಕ್ ಹೀರೊ ಶಿವರಾಜಕುಮಾರ್

ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ಹ್ಯಾಟ್ರಿಕ್ ಹೀರೊ ಶಿವರಾಜಕುಮಾರ್ ಅವರು ನಾಳೆ ಮೇ 6ರಂದು ಬೆಳಗಾವಿಗೆ ಆಗಮಿಸಲಿದ್ದಾರೆ.
ಬೆಳಗಾವಿ ಗ್ರಾಮೀಣ ವಿಧಾನಸಭಾ ಕ್ಷೇತ್ರದ ಶಾಸಕಿ, ಕಾಂಗ್ರೆಸ್ ಅಭ್ಯರ್ಥಿ ಲಕ್ಷ್ಮೀ ಹೆಬ್ಬಾಳಕರ ಪರ ಅವರು ಭರ್ಜರಿ ಪ್ರಚಾರ ಕೈಗೊಳ್ಳಲಿದ್ದಾರೆ.
ಸಂಜೆ 4 ಗಂಟೆಗೆ ಬೆಳಗಾವಿ ತಾಲೂಕಿನ ಸುಳೆಬಾವಿಗೆ ಆಗಮಿಸಲಿರುವ ಅವರು ಅಲ್ಲಿನ ಶ್ರೀ ಮಹಾಲಕ್ಷ್ಮೀ ದೇವಿ ದರ್ಶನ ಪಡೆದು ಕಾಂಗ್ರೆಸ್ ಪಕ್ಷದ ಕಾರ್ಯಕರ್ತರು ಹಾಗೂ ಸಾರ್ವಜನಿಕರೊಂದಿಗೆ ಸಂವಾದ ನಡೆಸಿ ಚುನಾವಣೆ ಪ್ರಚಾರ ಕಾರ್ಯ ಆರಂಭಿಸಲಿದ್ದಾರೆ.
5 ಗಂಟೆಗೆ ಶಿಂದೊಳ್ಳಿ ಗ್ರಾಮದಲ್ಲಿ ರೋಡ್ ಶೋ ನಡೆಸಿ ಪ್ರಚಾರ ಸಭೆಯನ್ನುದ್ದೇಶಿಸಿ ಮಾತನಾಡಲಿದ್ದಾರೆ. ಸಂಜೆ 7 ಗಂಟೆಗೆ ಹೊನ್ನಿಹಾಳ ಗ್ರಾಮದಲ್ಲಿ ರೋಡ್ ಶೋ ನಡೆಸಲಿದ್ದಾರೆ.
ಶಿವರಾಜಕುಮಾರ್ ಅವರ ಕಾರ್ಯಕ್ರಮಗಳ ಕುರಿತು ಶಾಸಕಿ, ಕಾಂಗ್ರೆಸ್ ಅಭ್ಯರ್ಥಿ ಲಕ್ಷ್ಮೀ ಹೆಬ್ಬಾಳಕರ ಅವರು ಜಾಲತಾಣಗಳಲ್ಲಿ ಕಾರ್ಯಕ್ರಮಗಳ ಮಾಹಿತಿಯ ವಿವರವುಳ್ಳ ವಿಡಿಯೊ ಹಂಚಿಕೊಂಡಿದ್ದಾರೆ.