
ಪ್ರಗತಿವಾಹಿನಿ ಸುದ್ದಿ: ಯುವತಿಯ ಮೇಲೆ ಲೈಂಗಿಕ ದೌರ್ಜನ್ಯ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಕಿರುತೆರೆ ಖ್ಯಾತ ನಟ ಚರಿತ್ ಬಾಳಪ್ಪನನ್ನು ಪೊಲೀಸರು ಬಂಧಿಸಿದ್ದಾರೆ.
‘ಮುದ್ದುಲಕ್ಷ್ಮೀ’ ಧಾರಾವಾಹಿ ಖ್ಯಾತಿಯ ಚರಿತ್ ಬಾಳಪ್ಪ ವಿರುದ್ಧ ಲೈಂಗಿಕ ದೌರ್ಜನ್ಯ ಆರೋಪ ಕೇಳಿಬಂದಿದೆ. ಈ ಹಿನ್ನೆಲೆಯಲ್ಲಿ ನಟ ಚರಿತ್ ನನ್ನು ಬೆಂಗಳೂರಿನ ಆರ್.ಆರ್.ನಗರ ಠಾಣೆ ಪೊಲೀಸರು ಬಂಧಿಸಿದ್ದಾರೆ.
ತನ್ನ ಪರಿಚಯದವಳೇ ಆಗಿದ್ದ ಗೆಳತಿ ಮೇಲೆಯೇ ಚರಿತ್ ಲೈಂಗಿಕ ದೌರ್ಜನ್ಯವೆಸಗಿದ್ದಾನೆ. ತನ್ನನ್ನು ಪೀತಿಸುವಂತೆ ಬಲವಂತ ಮಾಡುತ್ತಿದ್ದ. ಅಲ್ಲದೇ ಯುವತಿ ವಾಸಿಸುತ್ತಿದ್ದ ಮನೆಗೆ ನುಗ್ಗಿ ಸಹಚರರೊಂದಿಗೆ ಸೇರಿ ಕಿರುಕುಳ ನೀಡಿದ್ದಾನೆ ಎಂದು ಆರೋಪಿಸಲಾಗಿದೆ.
ಅಷ್ಟೇ ಅಲ್ಲ ಯುವತಿಯ ಬಳಿ ಚರಿತ್ ಹಣಕ್ಕೂ ಬೇಡಿಕೆ ಇಟ್ಟು ಬೆದರಿಕೆ ಹಾಕಿದ್ದಾನೆ ಎಂದು ತಿಳಿದುಬಂದಿದೆ. ಈ ಹಿನ್ನೆಲೆಯಲ್ಲಿ ಚರಿತ್ ಬಾಳಪ್ಪ ವಿರುದ್ಧ ಲೈಂಗಿಕ ದೌರ್ಜನ್ಯ, ಕೊಲೆ ಬೆದರಿಕೆ ಸೇರಿದಂತೆ ವಿವಿಧ ಪ್ರಕರಣ ದಾಖಲಾಗಿದೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ