Latest

ರಾಜ್ಯಸಭಾ ಬಿಜೆಪಿ ಸದಸ್ಯ ಮಹಾಮಾರಿ ಕೊವಿಡ್ ಗೆ ಬಲಿ

ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ರಾಜ್ಯಸಭಾ ಬಿಜೆಪಿ ಸದಸ್ಯ ಅಶೋಕ್ ಗಸ್ತಿ ಕೊರೊನಾ ಸೋಂಕಿಗೆ ಬಲಿಯಾಗಿದ್ದಾರೆ. ಅವರಿಗೆ ಕೇವಲ 55 ವರ್ಷ ವಯಸ್ಸಾಗಿತ್ತು.

ಸೆ.2ರಂದು ಅಶೋಕ್ ಗಸ್ತಿಯವರಿಗೆ ಕೊರೊನಾ ಪಾಸಿಟೀವ್ ಬಂದಿತ್ತು. ಆದರೆ ಅವರಿಗೆ ಯಾವುದೇ ಸೋಂಕಿನ ಲಕ್ಷಣಗಳು ಇರಲಿಲ್ಲ. ಆದಾಗ್ಯೂ ವೈದ್ಯರ ಸಲಹೆ ಮೇರೆಗೆ ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದರು.

Home add -Advt

ಎರಡು ದಿನಗಳಿಂದ ಅವರ ಆರೋಗ್ಯ ಸ್ಥಿತಿ ಬಿಗಡಾಯಿಸಿದ್ದರಿಂದ ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಆದರೆ ಇದೀಗ ಚಿಕಿತ್ಸೆ ಫಲಕಾರಿಯಾಗದೇ ಗಸ್ತಿ ನಿಧನರಾಗಿದ್ದಾರೆ ಎಂದು ತಿಳಿದುಬಂದಿದೆ.

ಮೂಲತ: ರಾಯಚೂರಿನ ಲಿಂಗಸಗೂರಿನವರಾದ ಅಶೋಕ್ ಗಸ್ತಿ ಕಳೆದ ನಾಲ್ಕು ತಿಂಗಳ ಹಿಂದಷ್ಟೇ ಬಿಜೆಪಿಯಿಂದ ರಾಜ್ಯಸಭಾ ಸದಸ್ಯರಾಗಿ ಆಯ್ಕೆಯಾಗಿದ್ದರು.

Related Articles

Back to top button