Latest

ಪೋರ್ನ್ ವಿಡಿಯೋ ಅಪ್ಲೋಡ್ ಆರೋಪ; ಖ್ಯಾತ ನಟಿ ಬಂಧನ

ಪ್ರಗತಿವಾಹಿನಿ ಸುದ್ದಿ; ಮುಂಬೈ: ಸೆಕ್ಸ್ ವಿಡಿಯೋಗಳನ್ನು ವೆಬ್ ಸೈಟ್ ನಲ್ಲಿ ಅಪ್ ಲೋಡ್ ಮಾಡಿದ್ದ ಆರೋಪಕ್ಕೆ ಸಂಬಂಧಿಸಿದಂತೆ ನಟಿ ಗೆಹನಾ ವಸಿಷ್ಠ ಅವರನ್ನು ಮುಂಬೈ ಕ್ರೈಂ ಬ್ರಾಂಚ್ ಪೊಲೀಸರು ಬಂಧಿಸಿದ್ದಾರೆ.

ಬಂಧಿತ ನಟಿ ಗೆಹನಾರನ್ನು ಇಂದು ನ್ಯಾಯಾಲಯಕ್ಕೆ ಹಾಜರುಪಡಿಸಲಾಗುತ್ತಿದೆ. ಮಧ್ಯಪ್ರದೇಶ ಮೂಲದ ಗಹನಾ ಖಾಸಗಿ ವಾಹಿನಿ ನಿರೂಪಕಿಯಾಗಿ ವೃತ್ತಿ ಜೀವನ ಆರಂಭಿಸಿದ್ದರು.

ಬಳಿಕ ಮಾಡೆಲಿಂಗ್ ಕ್ಷೇತ್ರಕ್ಕೆ ಕಾಲಿಟ್ಟ ಗೆಹನಾ 80 ಜಾಹೀರಾತುಗಳಲ್ಲಿ ಕಾಣಿಸಿಕೊಂಡಿದ್ದಾರೆ. ನಂತರದಲ್ಲಿ ಚಿತ್ರರಂಗಕ್ಕೂ ಕಾಲಿಟ್ಟ ಗೆಹನಾ ಹಾಟ್ ಮೂವ್ ಗಳಿಂದಲೇ ಸುದ್ದಿಯಾಗಿದ್ದರು. ಇದೀಗ ಗೆಹನಾ ವಿರುದ್ಧ ಸೆಕ್ಸ್ ವಿಡಿಯೋ ಅಪ್ ಲೋಡ್ ಮಾಡಿದ ಆರೋಪ ಕೇಳಿಬಂದಿದ್ದು, ಈ ಹಿನ್ನೆಲೆಯಲ್ಲಿ ನಟಿಯನ್ನು ಬಂಧಿಸಲಾಗಿದೆ.

Related Articles

Back to top button