*ಮಣ್ಣಲ್ಲಿ ಮಣ್ಣಾದ ಹಿರಿಯ ನಟಿ ಲೀಲಾವತಿ*

ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಹಿರಿಯ ನಟಿ ಲೀಲಾವತಿ ತಮ್ಮಿಷ್ಟದಂತೆ ತೋಟದ ಮನೆಯಲ್ಲಿಯೇ ಮಣ್ಣು ಸೇರಿದ್ದಾರೆ. ನಿನ್ನೆ ವಿಧಿವಶರಾಗಿದ್ದ ನಟಿ ಲೀಲಾವತಿ ಅವರ ಅಂತ್ಯಕ್ರಿಯೆ ಇಂದು ಸರ್ಕಾರಿ ಗೌರವಗಳೊಂದಿಗೆ ನೆರವೇರಿತು. ಬೆಂಗಳೂರು ಹೊರವಲಯದ ಸೋಲದೇವನಹಳ್ಳಿ ತೋಟದ ಮನೆಯಲ್ಲಿ ಭಂಟ ಸಮುದಾಯದ ಸಂಪ್ರದಾಯದ ಪ್ರಕಾರ ಲೀಲಾವತಿ ಅವರ ಅಂತ್ಯಕ್ರಿಯೆಯನ್ನು ಮಗ ವಿನೋದ್ ರಾಜ್ ನೆರವೇರಿಸಿದರು. ಇದಕ್ಕೂ ಮುನ್ನ ಬೆಂಗಳೂರಿನ ರವೀಂದ್ರ ಕಲಾಕ್ಷೇತ್ರದಲ್ಲಿ ಲೀಲಾವತಿ ಪಾರ್ಥಿವ ಶರೀರವನ್ನು ಅಂತಿಮ ದರ್ಶನಕ್ಕೆ ಇಡಲಾಗಿತ್ತು. ಬಳಿಕ ಮಧ್ಯಾಹ್ನ ಆಂಬುಲೆನ್ಸ್ ಮೂಲಕ ಸೋಲದೇವನಹಳ್ಳಿ ತೋಟಕ್ಕೆ ಕರೆದೊಯ್ಯಲಾಯಿತು. … Continue reading *ಮಣ್ಣಲ್ಲಿ ಮಣ್ಣಾದ ಹಿರಿಯ ನಟಿ ಲೀಲಾವತಿ*