Latest

ಖ್ಯಾತ ನಟಿಯ ಕಾರು ಭೀಕರ ಅಪಘಾತ; ಮಗಳು ಆಸ್ಪತ್ರೆಗೆ ದಾಖಲು

ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಬಹುಭಾಷಾ ತಾರೆ ನಟಿ ರಂಭಾ ಅವರ ಕಾರು ಅಪಘಾತಕ್ಕೀಡಾಗಿದ್ದು, ರಂಭಾ ಅವರ ಕಿರಿಯ ಮಗಳು ಗಂಭೀರವಾಗಿ ಗಾಯಗೊಂಡಿರುವ ಘಟನೆ ಬೆಳಕಿಗೆ ಬಂದಿದೆ.

ಕನ್ನಡ, ತೆಲುಗು, ತಮಿಳು, ಹಿಂದಿ ಸೇರಿದಂತೆ ಹಲವು ಭಾಷೆಗಳಲ್ಲಿ ಅಭಿನಯಿಸಿ ಜನಪ್ರಿಯತೆ ಪಡೆದಿರುವ ನಟಿ  ರಂಭಾ ಮದುವೆ ಬಳಿಕ ವಿದೇಶದಲ್ಲಿ ವಾಸವಾಗಿದ್ದಾರೆ. ಮಕ್ಕಳನ್ನು ಶಾಲೆಯಿಂದ ಕರೆ ತರುವಾಗ ಅವರ ಕಾರು ಅಪಘಾತಕ್ಕೀಡಾಗಿದೆ.

Home add -Advt

ಈ ಬಗ್ಗೆ ಸ್ವತ: ರಂಭಾ ಸಾಮಾಜಿಕ ಜಾಲತಾಣಗಳಲ್ಲಿ ತಿಳಿಸಿದ್ದು, ಮಕ್ಕಳನ್ನು ಕರೆತರುತ್ತಿದ್ದಾಗ ನಮ್ಮ ಕಾರಿಗೆ ಮತ್ತೊಂದು ಕಾರು ಡಿಕ್ಕಿ ಹೊಡೆದಿದೆ. ನಾನು ಸುರಕ್ಷಿತವಾಗಿದ್ದೇನೆ. ಆದರೆ ಮಗಳು ಸಶಾ ಗಂಭೀರವಾಗಿ ಗಾಯಗೊಂಡಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ. ಚಿಕಿತ್ಸೆ ಮುಂದುವರೆದಿದೆ. ಕಾರು ಸಂಪೂರ್ಣ ಜಖಂಗೊಂಡಿದೆ ಎಂದು ತಿಳಿಸಿದ್ದಾರೆ.

ಕಾರು ಅಪಘಾತದ ವೇಳೆ ಕಾರಿನ ಏರ್ ಬ್ಯಾಗ್ ತೆಗೆದುಕೊಂಡಿದ್ದರಿಂದ ನನಗೆ ದೊಡ್ಡಮಟ್ಟದ ತೊಂದರೆಯಾಗಿಲ್ಲ ಎಂದು ಹೇಳಿದ್ದಾರೆ.

ಸಿದ್ದರಾಮಯ್ಯ ವಿರುದ್ಧ ಲೋಕಾಯುಕ್ತದಲ್ಲಿ ದೂರು ದಾಖಲು

https://pragati.taskdun.com/politics/lokayuktacomplaint-fileagainest-siddaramaih/

Related Articles

Back to top button