
ಪ್ರಗತಿವಾಹಿನಿ ಸುದ್ದಿ: ಸ್ಯಾಂಡಲ್ ವುಡ್ ನಟಿ, ಮಾಜಿ ಸಂಸದೆ ರಮ್ಯಾಗೆ ನಟ ದರ್ಶನ್ ಫ್ಯಾನ್ಸ್ ನಿಂದ ಅಶ್ಲೀಲ ಸಂದೇಶ ಹಾಗೂ ಕಾಮೆಂಟ್ ಪ್ರಕರಣಕ್ಕೆ ಸಂಬಂಧಿಸಿದಂತೆ ಯಾವುದೇ ಕಾರಣಕ್ಕೂ ಕೇಸ್ ವಾಅಪಸ್ ಪಡೆಯಲ್ಲ ಎಂದು ರಮ್ಯಾ ಸ್ಪಷ್ಟ ಪಡಿಸಿದ್ದಾರೆ.
ಬೆಂಗಳೂರಿನ 46ನೇ ಸಿಟಿ ಸಿವಿಲ್ ನ್ಯಾಯಾಲಯದಲ್ಲಿ ವಿಚಾರಣೆ ವೇಳೆ ಆರೋಪಿಗಳು ಹಾಗೂ ಆರೋಪಿಗಳ ಕುಟುಂಬಸ್ಥರು ರಮ್ಯಾ ಅವರಲ್ಲಿ ಕ್ಷಮೆ ಕೇಳಿದ್ದಾರೆ. ನಮ್ಮಿಂದ ತಪ್ಪಾಗಿದೆ ಇದೊಂದು ಬಾರಿ ಕ್ಷಮಿಸಿ ಬಿಡಿ. ದಯವಿಟ್ಟು ಪ್ರಕರಣ ವಾಪಸ್ ಪಡೆಯಿರಿ ಎಂದು ಮನವಿ ಮಾಡಿಕೊಂಡಿದ್ದಾರೆ. ಆದರೆ ಇದಕ್ಕೆ ಪ್ರತಿಕ್ರಿಯಿಸಿರುವ ರಮ್ಯಾ, ಯಾವುದೇ ಕಾರಣಕ್ಕೂ ಕೇಸ್ ವಾಪಸ್ ಪಡೆಯಲ್ಲ. ಇದೊಂದು ಪಾಠ ಆಗಬೇಕು ಎಂದು ತಿಳಿಸಿದ್ದಾರೆ.
ಕೈಯಲ್ಲಿ ಮೊಬೈಲ್ ಇದೆ ಎಂದು ಸೋಷಿಯಲ್ ಮೀಡಿಯಾಗಳಲ್ಲಿ ಮನಬಂದಂತೆ ಕೆಟ್ಟದಾಗಿ ಕಾಮೆಂಟ್ ಮಾಡುವುದು ಸರಿಯಲ್ಲ. ಒಬ್ಬ ಹೆಣ್ಣುಮಗಳ ಬಗ್ಗೆ ಕೆಟ್ಟದಾಗಿ ಕಾಮೆಂಟ್ ಮಾಡುವ ಮೊದಲು ಸಾವಿರ ಬಾರಿ ಯೋಚಿಸುವಂತಾಗಬೇಕು. ಈ ಪ್ರಕರಣ ಎಲ್ಲರಿಗೂ ಒಂದು ಪಾಠವಾಗಬೇಕು ಎಂದು ರಮ್ಯಾ ಹೇಳಿದ್ದಾರೆ.
ಪ್ರಕರಣದಲ್ಲಿ ಎಷ್ಟು ಬಾರಿ ಸಾಕ್ಷ್ಯ ಹೇಳಲು ಕರೆದರೂ ನ್ಯಾಯಾಲಯಕ್ಕೆ ಬಂದು ಸಾಕ್ಷ್ಯ ನೀಡಲು ಸಿದ್ಧವಿದ್ದೇನೆ. ಆದರೆ, ಆರೋಪಿಗಳನ್ನ ಕ್ಷಮಿಸುವ ಪ್ರಶ್ನೆಯೇ ಇಲ್ಲ. ಕೇಸ್ ವಾಪಸ್ ಪಡೆಯಲ್ಲ ಎಂದಿದ್ದಾರೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ




