National

*ಹೊತ್ತಿ ಉರಿದ ಬಸ್: ಪ್ರಯಾಣಿಕರು ಪಾರು*

ಪ್ರಗತಿವಾಹಿನಿ ಸುದ್ದಿ: ಖಾಸಗಿ ಸ್ಲೀಪರ್ ಬಸ್‌ನಲ್ಲಿ ನಿನ್ನೆ ಇದ್ದಕ್ಕಿದ್ದಂತೆ ಬೆಂಕಿ ಹೊತ್ತಿಕೊಂಡ ಪರಿಣಾಮ ಬಸ್‌ನಲ್ಲಿದ್ದ ಪ್ರಯಾಣಿಕರು ಕಿಟಕಿಯಿಂದ ಹಾರಿ ಪಾರಾಗಿಯುವ ಘಟನೆ ಸದಾಬಾದ್ ಕೊತ್ವಾಲಿ ಪ್ರದೇಶದ ಯಮುನಾ ಎಕ್ಸ್‌ಪ್ರೆಸ್‌ ಹೆದ್ದಾರಿಯ ಮಿಧವಲಿ ಗ್ರಾಮದ ಬಳಿ ನಡೆದಿದೆ.

ದೆಹಲಿಯಿಂದ ಬಿಹಾರಕ್ಕೆ ಪ್ರಯಾಣಿಕರನ್ನು ತುಂಬಿಕೊಂಡು ಸಂಚರಿಸುತ್ತಿತ್ತು. ಈ ವೇಳೆ ಮಿಧವಲಿ ಗ್ರಾಮದ ಬಳಿ ಬಸ್‌ನ ಮೇಲ್ಬಾಗದಲ್ಲಿ ಇರಿಸಲಾಗಿದ್ದ ಲಗೇಜ್‌ಗೆ ಏಕಾಏಕಿ ಬೆಂಕಿ ಹೊತ್ತಿಕೊಂಡಿದೆ. ಬಸ್ ನಲ್ಲಿ ಏಕಾಏಕಿ ಬೆಂಕಿ ಕಾಣಿಸಿಕೊಂಡ ಹಿನ್ನಲೆ ಕೆಲ ಪ್ರಯಾಣಿಕರು ಬಸ್ ನ ಕಿಟಕಿಯಿಂದ ಹಾರಿ ಪ್ರಾಣ ಉಳಿಸಿಕೊಂಡಿದ್ದಾರೆ. ಪ್ರಯಾಣಿಕರ ಕಿರುಚಾಟ, ಕೂಗಾಟ ಕೇಳಿ ಸ್ಥಳೀಯರು ಬಂದು ಉಳಿದವರನ್ನು ರಕ್ಷಿಸಿದ್ದಾರೆ.

Home add -Advt

ಅಲ್ಲದೇ ಸುದ್ದಿ ತಿಳಿಯುತ್ತಿದ್ದಂತೆ ಕೂಡಲೇ ಸ್ಥಳಕ್ಕೆ ಆಗಮಿಸಿದ ಅಗ್ನಿ ಶಾಮಕ ಸಿಬ್ಬಂದಿ ಹಾಗೂ ಪೊಲೀಸರು ಘಟನಾ ಸ್ಥಳಕ್ಕೆ ಆಗಮಿಸಿದ್ದು, ಬೆಂಕಿ ನಂದಿಸುವಲ್ಲಿ ಯಶಸ್ವಿಯಾಗಿದ್ದಾರೆ. ಆದರೆ ಬಸ್‌ ಮೇಲ್ಬಾಗದಲ್ಲಿದ್ದ ಲಗೇಜ್ ಸಂಪೂರ್ಣ ಸುಟ್ಟು ಹೋಗಿದ್ದು, ಬೆಂಕಿ ಹೊತ್ತಿಕೊಳ್ಳಲು ಕಾರಣವೇನು ಎಂಬ ಬಗ್ಗೆ ಸದ್ಯಕ್ಕೆ ಮಾಹಿತಿ ದೊರೆತಿಲ್ಲ. ಅಲ್ಲದೇ ಈ ಘಟನೆಯಲ್ಲಿ ಯಾವುದೇ ಪ್ರಾಣಹಾನಿಯಾಗಿಲ್ಲ ಎಂದು ವರದಿಯಾಗಿದೆ.

Related Articles

Back to top button