ಕೊರೊನಾ ಸೋಂಕಿತರಿಗೆ ನೆರವಾಗಲು ನರ್ಸ್ ಆದ ಬಾಲಿವುಡ್ ನಟಿ

ಪ್ರಗತಿವಾಹಿನಿ ಸುದ್ದಿ; ಮುಂಬೈ: ಕೊರೊನಾ ವೈರಸ್ ವಿರುದ್ಧ ಹೋರಾಡಲು ಸೆಲೆಬ್ರಿಟಿಗಳು, ನಟ-ನಟಿಯರು ಹಲವು ರೀತಿಯಲ್ಲಿ ಸಹಾಯ ಮಾಡುತ್ತಿದ್ದಾರೆ. ಕೆಲವರು ಧನ ಸಹಾಯ ಮಾಡಿದರೆ, ಇನ್ನು ಕೆಲವರು ಸಾಮಾಜಿಕ ಜಾಗೃತಿ ಮೂಡಿಸುವಲ್ಲಿ ಮುಂದಾಗಿದ್ದಾರೆ. ಆದರೆ ಬಾಲಿವುಡ್ ನಟಿಯೊಬ್ಬರು ನರ್ಸ್ ಆಗಿ ಸೇವೆ ಸಲ್ಲಿಸಲು ಮುಂದಾಗಿದ್ದಾರೆ.

ಬಾಲಿವುಡ್ ನಟಿ ಶಿಖಾ ಮೆಲ್ಹೋತ್ರಾ ನರ್ಸ್ ಆಗಿ ಕಾರ್ಯ ನಿರ್ವಹಿಸುವ ಮೂಲಕ ಕೊರೊನಾ ಸೋಂಕು ತಡೆಯುವ ನಿಟ್ಟಿನಲ್ಲಿ ಕಾರ್ಯೋನ್ಮುಖರಾಗಿದ್ದಾರೆ. ಶಿಖಾ ಅವರ ಕಾರ್ಯಕ್ಕೆ ಎಲ್ಲರೂ ಮೆಚ್ಚುಗೆ ವ್ಯಕ್ತಪಡಿಸುತ್ತಿದ್ದಾರೆ.

ಈ ಕುರಿತು ತಮ್ಮ ಇನ್‍ಸ್ಟಾಗ್ರಾಮ್ ಪೋಸ್ಟ್ ನಲ್ಲಿ ಬರೆದುಕೊಂಡಿರುವ ಅವರು, ನಾನು ವರ್ಧಮಾನ್ ಮಹಾವೀರ್ ಮೆಡಿಕಲ್ ಕಾಲೇಜು ಹಾಗೂ ಸಫ್ದರ್‍ಜಂಗ್ ಆಸ್ಪತ್ರೆಯಲ್ಲಿ ಐದು ವರ್ಷಗಳ ಕಾಲ ಬಿಎಸ್‍ಸಿ ನರ್ಸಿಂಗ್ ಮಾಡಿರುವುದು ಹಲವರಿಗೆ ತಿಳಿದಿಲ್ಲ. ಈವರೆಗೆ ನನ್ನೆಲ್ಲ ಸಾಧನೆ ಹಾಗೂ ಕೆಲಸಗಳಿಗೆ ಪ್ರೋತ್ಸಾಹ ನೀಡಿದ್ದೀರಿ. ಈ ಬಾರಿಯೂ ನಿಮ್ಮ ಬೆಂಬಲ ಇರಲಿ. ಕೊರೊನಾ ವೈರಸ್‍ನ ಈ ಬಿಕ್ಕಟ್ಟಿನ ಸಂದರ್ಭದಲ್ಲಿ ನರ್ಸ್ ಡ್ರೆಸ್ ಹಾಕಿಕೊಂಡು ದೇಶ ಸೇವೆಗೆ ಮುಂದಾಗಿದ್ದೇನೆ. ಮುಂಬೈನಲ್ಲಿನ ಆಸ್ಪತ್ರೆಯೊಂದರಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ನಿಮ್ಮ ಆಶೀರ್ವಾದ ಸದಾ ಇರಲಿ. ಅಲ್ಲದೆ ಮನೆಯಲ್ಲೇ ಇರಿ ಸುರಕ್ಷಿತವಾಗಿರಿ, ಸರ್ಕಾರಕ್ಕೆ ಬೆಂಬಲ ನೀಡಿ ಎಂದು ಬರೆದುಕೊಂಡಿದ್ದಾರೆ.

 

Home add -Advt

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button