Kannada NewsKarnataka NewsLatest

*ನಟಿ ಸೌಮ್ಯ ಶೆಟ್ಟಿ ಅರೆಸ್ಟ್*

ಪ್ರಗತಿವಾಹಿನಿ ಸುದ್ದಿ: ಪತಿ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡ ಪ್ರಕರಣಕ್ಕೆ ಸಂಬಂಧಿಸಿದಂತೆ ನಟಿ ಸೌಮ್ಯ ಶೆಟ್ಟಿಯನ್ನು ಪೊಲೀಸರು ಬಂಧಿಸಿದ್ದಾರೆ.

ಸೌಮ್ಯ ಶೆಟ್ಟಿ ಪತಿ ಸುದೀಪ್ ರೈ ಮಾರ್ಚ್ 31ರಂದು ಚಿಕಿತ್ಸೆ ಫಲಕಾರಿಯಾಗದೇ ಸಾವನ್ನಪ್ಪಿದ್ದರು. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಸುದೀಪ್ ರೈ ತಂದೆ ಪೊಲೀಸರಿಗೆ ಸೌಮ್ಯ ವಿರುದ್ಧ ದೂರು ನೀಡಿದ್ದರು. ಈ ಪ್ರಕರಣದ ವಿಚಾರಣೆ ನಡೆಸುತ್ತಿರುವ ಪೊಲೀಸರು ಈಗ ಸೌಮ್ಯ ಶೆಟ್ಟಿಯನ್ನು ಬಂಧಿಸಿದ್ದಾರೆ. 

Related Articles
Home add -Advt

ಸುದೀಪ್ ರೈ ದಕ್ಷಿಣ ಕನ್ನಡ ಜಿಲ್ಲೆಯ ನೆಲ್ಯಾಡಿ ಮೂಲದ ಉದ್ಯಮಿಯಾಗಿದ್ದು, ಸೌಮ್ಯ ಜೊತೆ ಮದುವೆಯ ನಂತರ ಅವರು ಉಡುಪಿ ಜಿಲ್ಲೆಯ ಕಾರ್ಕಳದ ಬಂಗ್ಲೆಗುಡ್ಡೆಯ ಪತ್ನಿ ಮನೆಯಲ್ಲೇ ವಾಸವಿದ್ದರು.

ಸೌಮ್ಯ ಶೆಟ್ಟಿ ತನ್ನ ಮಗ ಆತ್ಮಹತ್ಯೆ ಮಾಡಿಕೊಳ್ಳುವುದಕ್ಕೆ ಪ್ರಚೋದನೆ ನೀಡಿದ್ದಾಳೆ ಎಂದು ಸುದೀಪ್ ರೈ ತಂದೆ ಪೊಲೀಸರಿಗೆ ದೂರು ನೀಡಿದ್ದರು. ಈಗ ಕಾರ್ಕಳದಲ್ಲಿ ಸೌಮ್ಯ ಶೆಟ್ಟಿಯನ್ನು ಪೊಲೀಸರು ಬಂಧಿಸಿದ್ದಾರೆ. ಅವರನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, ನ್ಯಾಯಾಲಯವು ಅವರಿಗೆ 14 ದಿನಗಳ ನ್ಯಾಯಾಂಗ ಬಂಧನ ವಿಧಿಸಿದೆ.

Related Articles

Back to top button