Kannada NewsKarnataka NewsLatest
*ಕೃಷಿ ಇಲಾಖೆಯ ಗುತ್ತಿಗೆ ನೌಕರ ಆತ್ಮಹತ್ಯೆ*

ಪ್ರಗತಿವಾಹಿನಿ ಸುದ್ದಿ: ಅಧಿಕಾರಿಗಳ ಕಿರುಕುಳಕ್ಕೆ ಬೇಸತ್ತು ಕೃಷಿ ಇಲಾಖೆಯ ಗುತ್ತಿಗೆ ನೌಕರ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬಳ್ಳಾರಿ ಜಿಲ್ಲೆಯ ಸಂಡೂರು ತಾಲೂಕಿನಲ್ಲಿ ನಡೆದಿದೆ.
ರಾಜು ಆತ್ಮಹತ್ಯೆಗೆ ಶರಣಾದ ಗುತ್ತಿಗೆ ನೌಕರ. ಮೇಲಧಿಕಾರಿಗಳ ಕಿರುಕುಳದಿಂದ ಮನನೊಂದು ರಾಜು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂಬ ಆರೋಪ ಕೇಳಿಬಂದಿದೆ.
ಮೃತ ರಾಜು ಗೌರಿಪುರ ಗ್ರಾಮದ ನಿವಾಸಿಯಾಗಿದ್ದು, ಸಂಡೂರು ಕೃಷಿ ಇಲಾಖೆಯಲ್ಲಿ ಗುತ್ತಿಗೆ ಆಧಾರದಲ್ಲಿ ಕೆಲಸ ಮಾಡುತ್ತಿದ್ದ. ಇತ್ತೀಚಿನ ದಿನಗಳಲ್ಲಿ ಅಧಿಕಾರಿಗಖ ಕಿರುಕುಳಕ್ಕೆ ಮಾನಸಿಕವಾಗಿ ನೊಂದಿದ್ದರು. ಕೃಷಿ ಇಲಾಖೆಯ ಅಧಿಕಾರಿಯೊಬ್ಬರು ನಿರಂತರವಾಗಿ ಕಿರುಕುಳ ನೀಡುತ್ತಿರುವುದಾಗಿ ರಾಜು ಡೆತ್ ನೋಡ್ ನಲ್ಲಿ ಬರೆದಿಟ್ಟು ಸಾವಿಗೆ ಶರಣಾಗಿದ್ದಾರೆ.
ಆತ್ಮಹತ್ಯೆಗೂ ಮುನ್ನ ಮೂರು ಪುಟಗಳ ಡೆತ್ ನೋಟ್ ಬರೆದಿರುವ ರಾಜು, ತನ್ನ ಸಾವಿಗೆ ಯಾರೆಲ್ಲ ಕಾರಣ ಎಂಬುದನ್ನು ಉಲ್ಲೇಖಿಸಿದ್ದಾರೆ ಎಂದು ತಿಳಿದುಬಂದಿದೆ. ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.




