Cancer Hospital 2
Beereshwara 36
LaxmiTai 5

*ಪತಿಯಿಂದ ನಟಿಯ ಕೊಲೆ: ಆರೋಪಿಗಾಗಿ ಪೊಲೀಸರ ಹುಡುಕಾಟ*

Anvekar 3
GIT add 2024-1

ಪ್ರಗತಿವಾಹಿನಿ ಸುದ್ದಿ: ಮೈಸೂರು ಜಿಲ್ಲೆಯ ಬನ್ನೂರಿನ ತುರಗನೂರಿನಲ್ಲಿ ಕಾಂಗ್ರೆಸ್ ಮುಖಂಡೆ, ಸಿನಿಮಾ ನಟಿ ವಿದ್ಯಾ ಅವರನ್ನು ಪತಿಯೇ ಭೀಕರವಾಗಿ ಹತ್ಯೆ ಮಾಡಿರುವ ಘಟನೆ ನಡೆದಿದೆ.

Emergency Service

ಕನ್ನಡದ ಭಜರಂಗಿ, ಚಿರಂಜೀವಿ ಸರ್ಜಾ ಅಭಿನಯದ ಅಜಿತ್ ಸೇರಿದಂತೆ ಅನೇಕ ಸಿನಿಮಾಗಳಲ್ಲಿ ಕೆಲಸ ಮಾಡಿದ್ದ ವಿದ್ಯಾ ಕೌಟುಂಬಿಕ ಕಲಹ ಹಿನ್ನೆಲೆ ಪತಿ ನಂದೀಶ್ ಹತ್ಯೆಗೈದು ಪರಾರಿಯಾಗಿದ್ದಾರೆ. ವಿದ್ಯಾ ಮೈಸೂರಿನ ಶ್ರೀರಾಂಪುರ ನಿವಾಸಿಯಾಗಿದ್ದು, ಬನ್ನೂರಿನ ತುರಗನೂರಿನ ನಂದೀಶ್ ಅವರನ್ನು ವಿವಾಹವಾಗಿದ್ದರು. ದಂಪತಿಗೆ ಇಬ್ಬರು ಹೆಣ್ಣು ಮಕ್ಕಳಿದ್ದಾರೆ. ಕಾಂಗ್ರೆಸ್ ಪಕ್ಷದ ಮೈಸೂರು ನಗರ ಪ್ರಧಾನ ಕಾರ್ಯದರ್ಶಿಯಾಗಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾಗಿ ಜವಾಬ್ದಾರಿ ನಿರ್ವಹಿಸಿದ್ದಾರೆ.  

ಇನ್ನು, ವಿದ್ಯಾ ಮತ್ತು ನಂದೀಶ್ ನಡುವೆ ಸಾಮರಸ್ಯ ಇರಲಿಲ್ಲವೆಂದು ತಿಳಿದುಬಂದಿದೆ. ನಿನ್ನೆ ತಡರಾತ್ರಿ ಬನ್ನೂರಿನ ತುರಗನೂರಿನಲ್ಲಿದ್ದ ಪತಿ ಮನೆಗೆ ವಿದ್ಯಾ ತೆರಳಿದ್ದಾರೆ. ದಂಪತಿ ನಡುವೆ ಮಾತಿಗೆ ಮಾತು ಬೆಳೆದು ಪರಿಸ್ಥಿತಿ ವಿಕೋಪಕ್ಕೆ ತಿರುಗಿದೆ. ಈ ವೇಳೆ ಪತ್ನಿ ತಲೆಗೆ ನಂದೀಶ್ ಹಲ್ಲೆ ನಡೆಸಿ ಹತ್ಯೆಗೈದು ಪರಾರಿಯಾಗಿದ್ದಾನೆ. ಘಟನಾ ಸ್ಥಳಕ್ಕೆ ಎಸ್ಪಿ ಸೀಮಾ ಲಾಟ್ಕರ್, ಅಡಿಷನಲ್ ಎಸ್ಪಿ ನಂದಿನಿ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಬನ್ನೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Bottom Add3
Bottom Ad 2