Belagavi NewsBelgaum NewsKannada NewsKarnataka NewsNationalPolitics

*ವೀರವನಿತೆ ಒನಕೆ ಓಬವ್ವ ಜಯಂತಿ ಅರ್ಥಪೂರ್ಣವಾಗಿ ಆಚರಣೆಗೆ ಅಪರ ಜಿಲ್ಲಾಧಿಕಾರಿ ವಿಜಯಕುಮಾರ ಹೊನಕೇರಿ ಸೂಚನೆ*

ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ಸರ್ಕಾರದ ಮಾರ್ಗಸೂಚಿ ಅನ್ವಯ ವೀರವನಿತೆ ಒನಕೆ ಓಬವ್ವ ಜಯಂತಿಯನ್ನು ನವೆಂಬರ್ 11 ರಂದು ಕುಮಾರ ಗಂಧರ್ವ ಕಲಾ ಮಂದಿರದಲ್ಲಿ ಅರ್ಥಪೂರ್ಣವಾಗಿ ಆಚರಣೆ ಮಾಡಲಾಗುವುದು ಎಂದು ಅಪರ ಜಿಲ್ಲಾಧಿಕಾರಿ ವಿಜಯಕುಮಾರ ಹೊನಕೇರಿ ಅವರು ತಿಳಿಸಿದರು.

ಜಿಲ್ಲಾಧಿಕಾರಿಗಳ ಕಚೇರಿಯ ಸಭಾಂಗಣದಲ್ಲಿ ಮಂಗಳವಾರ (ನ.05) ನಡೆದ ವೀರವನಿತೆ ಒನಕೆ ಓಬವ್ವ ಜಯಂತಿ ಆಚರಣೆಯ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ನ.11 ವೀರವನಿತೆ ಒನಕೆ ಓಬವ್ವ ಜಯಂತಿ ಕಾರ್ಯಕ್ರಮವನ್ನು ಕುಮಾರ ಗಂಧರ್ವ ಕಲಾ ಮಂದಿರದಲ್ಲಿ ಅಚ್ಚುಕಟ್ಟಾಗಿ ಆಚರಣೆ ಮಾಡಬೇಕು. ಜಯಂತಿ ಆಚರಣೆಗೆ ಅಗತ್ಯವಿರುವ ರೂಪರೇಶಗಳ ಸಿದ್ಧತೆ ಮಾಡಿಕೊಳ್ಳಬೇಕು ಎಂದು ಹೇಳಿದರು.

ಮಹಾನಗರ ಪಾಲಿಕೆ ವತಿಯಿಂದ ನಗರದ ಪ್ರಮುಖ 5 ವೃತ್ತಗಳಲ್ಲಿ ಜಯಂತಿ ಆಚರಣೆಯ ಕುರಿತು ನಾಮಫಲಕ ಹಾಗೂ ಕಾರ್ಯಕ್ರಮಕ್ಕೆ ಆಗಮಿಸುವ ಸಾರ್ವಜನಿಕರಿಗೆ ಊಟೋಪಚಾರ ವ್ಯವಸ್ಥೆ ಕಲ್ಪಿಸಬೇಕು.

Home add -Advt

ಮಹಾನಗರ ಪಾಲಿಕೆಯ ಎಸ್.ಸಿಪಿ-ಟಿಎಸ್.ಪಿ 24.01 ಅನುದಾನದಲ್ಲಿ ಇಂಜಿನೀರಿಂಗ್ ಮೆಡಿಕಲ್ ಕಾಲೇಜು ವಿದ್ಯಾರ್ಥಿಗಳಿಗೆ ಲ್ಯಾಪ್ ಟಾಪ್ ವಿತರಣೆ ಮಾಡಬೇಕು ಎಂದು ಪಾಲಿಕೆ ಅಧಿಕಾರಿಗಳಿಗೆ ಸೂಚಿಸಿದರು.

ಅತೀ ಹೆಚ್ಚು ಅಂಕ ಪಡೆದ ಶಾಲಾ ಕಾಲೇಜು ವಿದ್ಯಾರ್ಥಿನಿಯರಿಗೆ ಹಾಗೂ ವಿವಿಧ ಕ್ಷೇತ್ರಗಳಲ್ಲಿ ಸಾಧನೆಗೈದ ಮಹಿಳಾ ಸಾಧಕರಿಗೆ ಸನ್ಮಾನ ಕಾರ್ಯಕ್ರಮ ಏರ್ಪಡಿಸಬೇಕು ಎಂದು ಅಪರ ಜಿಲ್ಲಾಧಿಕಾರಿ ವಿಜಯಕುಮಾರ ಹೊನಕೇರಿ ಹೇಳಿದರು.

ಜಿಲ್ಲಾ ಪಂಚಾಯತ್ ಉಪ ಕಾರ್ಯದರ್ಶಿ ಬಸವರಾಜ ಹೆಗ್ಗನಾಯಕ, ಮಹಾನಗರ ಪಾಲಿಕೆ ಉಪ ಆಯುಕ್ತ ಉದಯಕುಮಾರ ತಳವಾರ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಉಪ ನಿರ್ದೇಶಕಿ ವಿದ್ಯಾವತಿ ಭಜಂತ್ರಿ, ಮುಖಂಡರಾದ ಮಲ್ಲೇಶ ಚೌಗಲಾ, ದುರ್ಗೇಶ ಮೇತ್ರಿ, ಮಹಾದೇವ ತಳವಾರ, ಮಲ್ಲಿಕಾರ್ಜುನ್ ರಾಶಿಂಗೆ ಸೇರಿದಂತೆ ಸಮಾಜದ ಮುಖಂಡರು ಸಭೆಯಲ್ಲಿ ಉಪಸ್ಥಿತರಿದ್ದರು.

Related Articles

Back to top button