Belagavi NewsBelgaum NewsKannada NewsKarnataka News

ಆಗಸ್ಟ್ 1ರಂದು ವ್ಯಸನ ಮುಕ್ತ ದಿನಾಚರಣೆ: ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ 

ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ಇಳಕಲ್ ನ ಚಿತ್ತರಗಿ ಶ್ರೀ ವಿಜಯ ಮಹಾಂತೇಶ್ವರ ಸಂಸ್ಥಾನಮಠದ ಮ.ನಿ.ಪ್ರ. ಡಾ.‌ಮಹಾಂತ ಶಿವಯೋಗಿಗಳ ಜನ್ಮದಿನವನ್ನು ಸರಕಾರದ ಮಾರ್ಗಸೂಚಿ ಪ್ರಕಾರ ಆಗಸ್ಟ್ 1 ರಂದು ವ್ಯಸನ ಮುಕ್ತ ದಿನಾಚರಣೆಯನ್ನಾಗಿ ಅರ್ಥಪೂರ್ಣವಾಗಿ ಆಚರಿಸಲು ಸಕಲ ಸಿದ್ದತೆಗಳನ್ನು ಕೈಗೊಳ್ಳುವಂತೆ ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಅವರು ಸೂಚನೆ ನೀಡಿದರು.

ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ‌ ಸೋಮವಾರ (ಜು.29) ಜರುಗಿದ ವ್ಯಸನ‌ಮುಕ್ತ ದಿನಾಚರಣೆಯ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ರಾಜ್ಯ ಸರಕಾರದ ವತಿಯಿಂದ ಡಾ. ಮಹಾಂತ ಶಿವಯೋಗಿಗಳ ಜನ್ಮ‌ದಿನವನ್ನು ಆಗಸ್ಟ 1 ರಂದು  ವ್ಯಸನ ಮುಕ್ತ ದಿನಾಚರಣೆಯನ್ನಾಗಿ ಆಚರಿಸಲಾಗುತ್ತಿದೆ. ಸರ್ಕಾರದ‌ ಮಾರ್ಗಸೂಚಿಗಳನ್ವಯ ಕಾರ್ಯಕ್ರಮವನ್ನು ಯಶಸ್ವಿಗೊಳಿಸಲು ತಿಳಿಸಿದರು.

ಆಗಸ್ಟ್ 1 ರಂದು‌ ಮುಂಜಾನೆ 11  ಗಂಟೆಗೆ ನಗರದ ಕುಮಾರ ಗಂಧರ್ವ ರಂಗಂದಿರದಲ್ಲಿ ಜಿಲ್ಲಾಟ್ಟದ ಕಾರ್ಯಕ್ರಮವನ್ನು ಆಯೋಜಿಸಬೇಕು ಅದರಂತೆ ತಾಲೂಕು‌ ಮಟ್ಟದಲ್ಲಿಯೂ ಸಹ ಕಾರ್ಯಕ್ರಮಗಳ‌ ಆಯೋಜನೆಗೆ ತಹಶೀಲ್ದಾರರುಗಳಿಗೆ ಸೂಚಿಸಿದರು.

ವ್ಯಸನ ಮುಕ್ತ ದಿನಾಚರಣೆ ಪ್ರಯುಕ್ತ ಸಂಪನ್ಮೂಲ‌ ವ್ಯಕ್ತಿಗಳ ಮೂಲಕ ಉಪನ್ಯಾಸ‌ ಕಾರ್ಯಕ್ರಮವನ್ನು ಆಯೋಜಿಸಬೇಕು.‌ 

ಶಾಲಾ, ಕಾಲೇಜು ವಿದ್ಯಾರ್ಥಿಗಳು ಹಾಗೂ ಯುವ ಸಮುದಾಯದವರಿಗೆ ಮಾದಕ ವಸ್ತುಗಳ ಬಳಕೆಯಿಂದ‌‌ ಆಗುವಂತಹ ದುಷ್ಪರಿಣಾಮಗಳ‌  ಕುರಿತು ಜಾಗೃತಿ ಮೂಡಿಸಬೇಕು. ಈ ನಿಟ್ಟಿನಲ್ಲಿ ಸಂಬಂಧಿಸಿದ ಇಲಾಖೆಗಳು ತಮಗೆ ವಹಿಸಿದ ಜವಬ್ದಾರಿಯನ್ನು ಅಚ್ಚುಕಟ್ಟಾಗಿ ನಿರ್ವಹಿಸುವದರ ಮೂಲಕ ಕಾರ್ಯಕ್ರಮವನ್ನು ಯಶಸ್ವಿಗೊಳಿಸಲು ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್   ಸೂಚಿಸಿದರು.

ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ವಿಜಯಕುಮಾರ ಹೊನಕೇರಿ, ಮಹಾನಗರ ಪಾಲಿಕೆ ಆಯುಕ್ತ ಅಶೋಕ ದುಡಗುಂಟಿ,  ಹೆಚ್ಚುವರಿ ಪೋಲಿಸ್ ವರಿಷ್ಠಾಧಿಕಾರಿ ಆರ್.ಬಿ.ಬಸರಗಿ, ವಾರ್ತಾ ಇಲಾಖೆ ಉಪನಿರ್ದೆಶಕರಾದ ಗುರುನಾಥ ಕಡಬೂರ, ಸಮಾಜ ಕಲ್ಯಾಣ ಇಲಾಖೆ‌ ಜಂಟಿ‌ನಿರ್ದೆಶಕ ನವೀನ ಶಿಂತ್ರೆ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಉಪನಿರ್ದೆಶಕರಾದ ವಿದ್ಯಾವತಿ‌ ಭಜಂತ್ರಿ ಸೇರಿದಂತೆ ವಿವಿಧ ಇಲಾಖೆ ಅಧಿಕಾರಿಗಳು ಉಪಸ್ಥಿತರಿದ್ದರು.

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button