*ವ್ಯಸನಮುಕ್ತ ದಿನಾಚರಣೆ: ಆ.1 ರಂದು ಬೆಳಗಾವಿಯಲ್ಲಿ ವಿಶೇಷ ಜಾಗೃತಿ ಜಾಥಾ*
ಪ್ರಗತಿವಾಹಿನಿ ಸುದ್ದಿ; ಬೆಳಗಾವಿ: ಬೆಳಗಾವಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ, ಕರ್ನಾಟಕ ರಾಜ್ಯ ಮದ್ಯಪಾನ ಸಂಯಮ ಮಂಡಳಿ, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ, ಆರೋಗ್ಯ ಇಲಾಖೆ, ಶಿಕ್ಷಣ ಇಲಾಖೆ, ಮಹಾನಗರ ಪಾಲಿಕೆ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಆಶ್ರಯದಲ್ಲಿ ನಗರದ ಕುಮಾರ ಗಂಧರ್ವ ಕಲಾ ಮಂದಿರದಲ್ಲಿ ಮಂಗಳವಾರ (ಆ.1) ರಂದು ಬೆಳಿಗ್ಗೆ 11 ಗಂಟೆಗೆ ವ್ಯಸನಮುಕ್ತ ದಿನಾಚರಣೆ ಏರ್ಪಡಿಲಾಗಿದೆ.
ನಗರದ ಕೋಟೆ ಕೆರೆಯಿಂದ ಕುಮಾರ ಗಂಧರ್ವ ಕಲಾ ಮಂದಿರದ ವರೆಗೆ ಬೆಳಿಗ್ಗೆ 10.30 ಗಂಟೆಗೆ ಜಾಗೃತಿ ಜಾಥಾ ಕಾರ್ಯಕ್ರಮ ನಡೆಯಲಿದೆ.
ಲೋಕೋಪಯೋಗಿ ಇಲಾಖೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಸತೀಶ್ ಜಾರಕಿಹೊಳಿ ಅವರು ಕಾರ್ಯಕ್ರಮ ಉದ್ಘಾಟಿಸಲಿದ್ದು, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ, ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ ಅವರು ಮುಖ್ಯ ಅತಿಥಿಗಳಾಗಿ ಆಗಮಿಸಲಿದ್ದಾರೆ.
ಬೆಳಗಾವಿ ಉತ್ತರ ವಿಧಾನಸಭಾ ಮತ ಕ್ಷೇತ್ರದ ಶಾಸಕರಾದ ಆಸಿಫ್ (ರಾಜು) ಶೇಠ್ ಅವರು ಅಧ್ಯಕ್ಷತೆ ವಹಿಸಿದ್ದಾರೆ.
ವಿಶೇಷ ಆಹ್ವಾನಿತರಾಗಿ ಪ್ರಾದೇಶಿಕ ಆಯುಕ್ತರಾದ ಸಂಜಯ ಶೆಟ್ಟೆಣ್ಣವರ, ಜಿಲ್ಲಾಧಿಕಾರಿ ನಿತೇಶ್ ಪಾಟೀಲ, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಕಾಧಿಕಾರಿ ಹರ್ಷಲ್ ಭೋಯರ್ ಆಗಮಿಸಲಿದ್ದಾರೆ.
ಅದೇ ರೀತಿಯಲ್ಲಿ ಬೆಳಗಾವಿ ಉತ್ತರ ವಲಯದ ಆರಕ್ಷಕ ಮಹಾನಿರೀಕ್ಷಕರಾದ ವಿಕಾಸ ಕುಮಾರ ವಿಕಾಸ, ನಗರ ಪೊಲೀಸ್ ಆಯುಕ್ತರಾದ ಎಸ್.ಎನ್ ಸಿದ್ದರಾಮಪ್ಪ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸಂಜೀವ ಪಾಟೀಲ, ಮಹಾನಗರ ಪಾಲಿಕೆ ಆಯುಕ್ತರಾದ ಅಶೋಕ ದುಡಗುಂಟಿ ಅವರು ಆಗಮಿಸಲಿದ್ದಾರೆ
ವಿಶೇಷ ಉಪನ್ಯಾಸ:
ಕಾರ್ಯಕ್ರಮದಲ್ಲಿ ಮದ್ಯಪಾನ, ಮಾದಕ ದ್ರವ್ಯ ಹಾಗೂ ತಂಬಾಕು ಸೇವನೆಯಿಂದಾಗುವ ದುಷ್ಪರಿಣಾಮಗಳ ಬಗ್ಗೆ ಅರಿವು ಮೂಡಿಸುವ ಕುರಿತು ಸುಪ್ರಸಿದ್ಧ ಸಾಹಿತಿಗಳು ಹಾಗೂ ಪ್ರವಚನಕಾರರಾದ ಸಿದ್ದಣ್ಣ ಲಂಗೋಟಿ ಅವರು ವಿಶೇಷ ಉಪನ್ಯಾಸ ನೀಡಲಿದ್ದಾರೆ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ