NationalWorld

*ಪಾಕ್ ಶೆಲ್ ದಾಳಿಗೆ ಹೆಚ್ಚುವರಿ ಜಿಲ್ಲಾಧಿಕಾರಿ ಸಾವು*

ಪ್ರಗತಿವಾಹಿನಿ ಸುದ್ದಿ: ಜಮ್ಮುವಿನ ರಾಜರಿ ಪಟ್ಟಣದ ಮೇಲೆ ಅಪ್ಪಳಿಸಿದ ಪಾಕಿಸ್ತಾನಿ ಶೆಲ್ ದಾಳಿಯಲ್ಲಿ  ಹಿರಿಯ ಸರ್ಕಾರಿ ಅಧಿಕಾರಿಯೊಬ್ಬರು ಸಾವನ್ನಪ್ಪಿದ್ದು, ಇಬ್ಬರು ಸಿಬ್ಬಂದಿ ತೀವ್ರವಾಗಿ ಗಾಯಗೊಂಡಿದ್ದಾರೆ ಎಂದು ದೃಢಪಡಿಸಲಾಗಿದೆ.

ರಾಜರಿ ಪಟ್ಟಣವನ್ನು ಗುರಿಯಾಗಿಸಿಕೊಂಡು ಪಾಕ್ ಶೆಲ್ ದಾಳಿ ನಡೆಸಿದೆ. ಪರಿಣಾಮ ನಮ್ಮ ಹೆಚ್ಚುವರಿ ಜಿಲ್ಲಾ ಅಭಿವೃದ್ಧಿ ಆಯುಕ್ತ ರಾಜ್ ಕುಮಾರ್ ಥಾಪ್ಪಾ ಸಾವನ್ನಪ್ಪಿದ್ದಾರೆ.

ನಾವು ಜಮ್ಮು ಮತ್ತು ಕಾಶ್ಮೀರ ಆಡಳಿತ ಸೇವೆಗಳ ಸಮರ್ಪಿತ ಅಧಿಕಾರಿಯನ್ನು ಕಳೆದುಕೊಂಡಿದ್ದೇವೆ. ನಿನ್ನೆಯಷ್ಟೇ ಅವರು ಜಿಲ್ಲೆಯಾದ್ಯಂತ ಉಪ ಮುಖ್ಯಮಂತ್ರಿಯೊಂದಿಗೆ ಇದ್ದರು ಮತ್ತು ನಾನು ಅಧ್ಯಕ್ಷತೆ ವಹಿಸಿದ್ದ ಆನ್‌ಲೈನ್ ಸಭೆಯಲ್ಲಿ ಭಾಗವಹಿಸಿದ್ದರು. ಈ ಭೀಕರ ಜೀವಹಾನಿಗೆ ನನ್ನ ಆಘಾತ ಮತ್ತು ದುಃಖವನ್ನು ವ್ಯಕ್ತಪಡಿಸಲು ನನಗೆ ಪದಗಳಿಲ್ಲ. ಅವರ ಆತ್ಮಕ್ಕೆ ಶಾಂತಿ ಸಿಗಲಿ” ಎಂದು ಒಮರ್ ಅಬ್ದುಲ್ಲಾ ತಮ್ಮ ಎಕ್ಸ್ ಖಾತೆಯಲ್ಲಿ ಮಾಹಿತಿ ಹಂಚಿಕೊಂಡಿದ್ದಾರೆ.

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button