Kannada NewsLatest

ವಿದ್ಯಾರ್ಥಿ ಮೇಲೆ ಹಲ್ಲೆ ಪ್ರಕರಣ; IGP ನೇತೃತ್ವದಲ್ಲಿ ತನಿಖೆ

 

ಪ್ರಗತಿವಾಹಿನಿ ಸುದ್ದಿ; ಬೆಳಗಾವಿ: ಬೆಳಗಾವಿ ಕಾಲೇಜಿನಲ್ಲಿ ಕನ್ನಡ ಬಾವುಟ ಹಿಡಿದಿದ್ದ ವಿದ್ಯಾರ್ಥಿ ಮೇಲೆ ಮರಾಠಿ ವಿದ್ಯಾರ್ಥಿಗಳು ಹಲ್ಲೆ ನಡೆಸಿದ್ದ ಪ್ರಕರಣದಲ್ಲಿ ಹಲ್ಲೆಗೊಳಗಾದ ವಿದ್ಯಾರ್ಥಿಗೆ ಪೊಲೀಸರಿಂದಲೂ ಥಳಿತ ವಿಚಾರಕ್ಕೆ ಸಂಬಂಧಿಸಿದಂತೆ ರಾಜ್ಯ ಕಾನೂನು ಮತ್ತು ಸುವ್ಯವಸ್ಥೆ ಎಡಿಜಿಪಿ ಅಲೋಕ್ ಕುಮಾರ್ ಅಧಿಕಾರಿಗಳಿಗೆ ಖಡಕ್ ಎಚ್ಚರಿಕೆ ನೀಡಿದ್ದಾರೆ.

ಬಾವುಟ ಹಾರಿಸಿದ ವಿದ್ಯಾರ್ಥಿ ಮೇಲೆ ಹಲ್ಲೆ ನಡೆಸಿದವರ ಮೇಲೆ ಕ್ರಮ ಕೈಗೊಳ್ಳಲಾಗುವುದು. ಅಲ್ಲದೇ ಬೆಳಗಾವಿ ಐಜಿಪಿ ನೇತೃತ್ವದಲ್ಲಿ ತನಿಖೆ ನಡೆಸಲಾಗುವುದು ಎಂದು ಟ್ವೀಟ್ ಮೂಲಕ ಮಾಹಿತಿ ನೀಡಿದ್ದಾರೆ.

ಗೋಗಟೆ ಕಾಲೇಜಿನಲ್ಲಿ ನಡೆದಿದ್ದ ಕಾರ್ಯಕ್ರಮದಲ್ಲಿ ಕನ್ನಡ ಬಾವುಟ ಹಿಡಿದು ಡಾನ್ಸ್ ಮಾಡುತ್ತಿದ್ದ ವಿದ್ಯಾರ್ಥಿ ಮೇಲೆ ಸಹಪಾಠಿಗಳೇ ಹಲ್ಲೆ ನಡೆಸಿದ್ದರು. ಗಲಾಟೆ ಬೆನ್ನಲ್ಲೇ ಹಲ್ಲೆಗೊಳಗಾದ ವಿದ್ಯಾರ್ಥಿಯನ್ನು ವಿಚಾರಣೆ ನೆಪದಲ್ಲಿ ಕರೆದೊಯ್ದ ಪೊಲೀಸರು ಆತನನ್ನು ಥಳಿಸಿದ್ದಾಗಿ ಸ್ವತ: ವಿದ್ಯಾರ್ಥಿ ಆರೋಪಿಸಿದ್ದಾನೆ. ವಿದ್ಯಾರ್ಥಿ ಮೇಲೆ ಪೊಲೀಸರಿಂದಲೂ ಹಲ್ಲೆ ಪ್ರಕರಣ ಖಂಡಿಸಿ ಅಧಿಕಾರಿಗಳ ವಿರುದ್ಧ ಹಾಗೂ ಮರಾಠಿ ಪುಂಡ ವಿದ್ಯಾರ್ಥಿಗಳ ವಿರುದ್ಧ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿ ಕರವೇ ಕಾರ್ಯಕರ್ತರು ಪ್ರತಿಭಟನೆ ನಡೆಸಿದ್ದಾರೆ.

ಮರಾಠಿ ಪುಂಡ ವಿದ್ಯಾರ್ಥಿಗಳ ಬಂಧನಕ್ಕೆ ಆಗ್ರಹ; ಪೊಲೀಸರ ವಿರುದ್ಧವೂ ಕ್ರಮಕ್ಕೆ ಒತ್ತಾಯ; ಕರವೇ ಪ್ರತಿಭಟನೆ

https://pragati.taskdun.com/belagavigogate-collagekannada-flagkarave-protest/

https://pragati.taskdun.com/the-student-was-also-assaulted-by-the-police/

ಕನ್ನಡ ಭಾವುಟ ಹಿಡಿದು ಡಾನ್ಸ್ ಮಾಡಿ ಥಳಿತಕ್ಕೊಳಗಾಗಿದ್ದ ವಿದ್ಯಾರ್ಥಿ ಮೇಲೆ ಪೊಲೀಸರಿಂದಲೂ ಅಮಾನುಷ ಹಲ್ಲೆ ಆರೋಪ

 

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button