
ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಪಿಎಸ್ ಐ ನೇಮಕಾತಿ ಅಕ್ರಮ ಹಗರಣದಲ್ಲಿ ಬಂಧಿತರಾಗಿರುವ ಎಡಿಜಿಪಿ ಅಮೃತ್ ಪೌಲ್ ಅವರಿಗೆ 14 ದಿನಗಳ ಕಾಲ ನ್ಯಾಯಂಗ ಬಂಧನ ವಿಧಿಸಲಾಗಿದೆ.
ಅಮೃತ್ ಪೌಲ್ ಅವರ ಸಿಐಡಿ ಕಸ್ಟಡಿ ಅವಧಿ ಇಂದು ಮುಕ್ತಾಯವಾಗಿದ್ದ ಹಿನ್ನೆಲೆಯಲ್ಲಿ ಬೆಂಗಳೂರಿನ 1ನೇ ಎಸಿಎಂಎಂ ನ್ಯಾಯಾಲಯಕ್ಕೆ ಅಮೃತ್ ಪೌಲ್ ಅವರನ್ನು ಹಾಜರುಪಡಿಸಲಾಗಿತ್ತು. ವಿಚಾರಣೆ ನಡೆಸಿದ ನ್ಯಾಯಾಲಯ ಅಮೃತ್ ಪೌಲ್ ಅವರಿಗೆ 14 ದಿನಗಳ ನ್ಯಾಯಾಂಗ ಬಂಧನ ವಿಧಿಸಿ ಆದೇಶ ನೀಡಿದೆ.
ಇದೇ ವೇಳೆ ಅಮೃತ್ ಪೌಲ್ ವೈದ್ಯಕೀಯ ಚಿಕಿತ್ಸೆಯಲ್ಲಿರುವುದರಿಂದ ಅವರಿಗೆ ಮಂಪರು ಪರೀಕ್ಷೆ ಸಧ್ಯಕ್ಕೆ ಬೇಡ ಎಂದು ನ್ಯಾಯಾಲಯ ತಿಳಿಸಿದೆ.