
ಪ್ರಗತಿವಾಹಿನಿ ಸುದ್ದಿ, ಬೆಳಗಾವಿ : ಬೆಳಗಾವಿಯ ಪ್ರಸಿದ್ಧ ಆದಿತ್ಯ ಮಿಲ್ಕ್ ಮಾಲಿಕ ಶಿವಕಾಂತ ಸಿದ್ನಾಳ ನಿಧನರಾಗಿದ್ದಾರೆ. ಅವರಿಗೆ 49 ವರ್ಷ ವಯಸ್ಸಾಗಿತ್ತು.
ಮಾಜಿ ಸಂಸದ ದಿ. ಎಸ್.ಬಿ.ಸಿದ್ನಾಳ ಅವರ ಪುತ್ರ ಹಾಗೂ ವಿಆರ್ ಎಲ್ ಸಮೂಹದ ಚೇರಮನ್ ವಿಜಯ ಸಂಕೇಶ್ವರ ಅವರ ಅಳಿಯರಾಗಿದ್ದ ಶಿವಕಾಂತ ಸಿದ್ನಾಳ ಕೆಲಕಾಲದಿಂದ ಅನಾರೋಗ್ಯದಿಂದ ಬಳಲುತ್ತಿದ್ದರು. ಶನಿವಾರ ಮಧ್ಯಾಹ್ನ 1.30ರ ಹೊತ್ತಿಗೆ ಬೆಳಗಾವಿಯ ತಮ್ಮ ಮನೆಯಲ್ಲಿ ನಿಧನರಾದರು. ಅವರಿಗೆ ಪತ್ನಿ, ಓರ್ವ ಪುತ್ರ ಹಾಗೂ ಓರ್ವ ಪುತ್ರಿ ಇದ್ದಾರೆ.
ಬೈಲಹೊಂಗಲ ತಾಲೂಕಿನ ಕುರಗುಂದದ ಆದಿತ್ಯ ಮಿಲ್ಕ್ ಆವರಣದಲ್ಲಿ ಭಾನುವಾರ ಮಧ್ಯಾಹ್ನ 12 ಗಂಟೆಯಿಂದ 3 ಗಂಟೆಯವರೆಗೆ ಅಂತಿಮ ದರ್ಶನಕ್ಕೆ ಅವಕಾಶ ನೀಡಿ ನಂತರ ಅಂತ್ಯ ಸಂಸ್ಕಾರ ನಡೆಸಲಾಗುವುದು ಎಂದು ಕುಟುಂಬದ ಮೂಲಗಳು ತಿಳಿಸಿವೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ