
ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಭ್ರಷ್ಟಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿತರಾಗಿದ್ದ ಎಡಿಜಿಪಿ ಅಮೃತ್ ಪೌಲ್ ಹಾಗೂ ಐಎ ಎಸ್ ಅಧಿಕಾರಿ ಮಂಜುನಾಥ್ ಅವರನ್ನು ಅಮಾನತು ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.
ಪಿಎಸ್ ಐ ನೇಮಕಾತಿ ಅಕ್ರಮದಲ್ಲಿ ಭಾಗಿಯಾಗಿದ್ದ ಆರೋಪಿದಲ್ಲಿ ಸಿಐಡಿಯಿಂದ ಬಂಧಿಸಲ್ಪಟ್ಟಿರುವ ಎಡಿಜಿಪಿ ಅಮೃತ್ ಪೌಲ್ ಹಾಗೂ ಭ್ರಷ್ಟಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಎಸಿಬಿ ಅಧಿಕಾರಿಗಳಿಂದ ಬಂಧಿಸಲ್ಪಟ್ತಿರುವ ಐಎ ಎಸಧಿಕಾರಿ ಜೆ.ಮಂಜುನಾಥ್ ಅವರನ್ನು ಕರ್ತವ್ಯದಿಂದ ಅಮಾನತುಗೊಳಿಸಲಾಗಿದೆ.
ಈ ಕುರುತು ಗೃಹ ಸಚಿವ ಅರಗ ಜ್ಞಾನೇಂದ್ರ ಮಾಹಿತಿ ನೀಡಿದ್ದು, ಪಿಎಸ್ ಐ ನೇಮಕಾತಿ ಅಕ್ರಮ ಹಾಗೂ ಭ್ರಷ್ಟಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಅಧಿಕಾರಿಗಳನ್ನು ಬಂಧಿಸಲಾಗಿದ್ದು, ತನಿಖೆ ಮುಂದುವರೆದಿದೆ. ಅಧಿಕಾರಿಗಳನ್ನು ಸಸ್ಪೆಂಡ್ ಮಾಡಿ ಕ್ರಮ ಕೈಗೊಳ್ಳಲಾಗಿದೆ ಎಂದು ತಿಳಿಸಿದ್ದಾರೆ.
ಚಂದ್ರಶೇಖರ್ ಗುರೂಜಿ ಹತ್ಯೆ ಕೇಸ್; ಹುಬ್ಬಳ್ಳಿ-ಬೆಳಗಾವಿ ಮಾರ್ಗದಲ್ಲಿ ಇಬ್ಬರು ಆರೋಪಿಗಳು ಅರೆಸ್ಟ್