Belagavi NewsBelgaum NewsKannada NewsKarnataka NewsLatestPolitics
*ದತ್ತು ಸ್ವೀಕಾರ ಕೇಂದ್ರದ ಇಬ್ಬರು ಮಕ್ಕಳಿಗೆ ನಾಮಕರಣ ಮಾಡಿದ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್*


ಪ್ರಗತಿವಾಹಿನಿ ಸುದ್ದಿ; ಬೆಳಗಾವಿ: ಬೆಳಗಾವಿಯ ರಾಮತೀರ್ಥ ನಗರದಲ್ಲಿ ಹೊಸದಾಗಿ ಪ್ರಾರಂಭಿಸಿರುವ ಸರ್ಕಾರಿ ದತ್ತು ಸ್ವೀಕಾರ ಕೇಂದ್ರದಲ್ಲಿ ಪ್ರಪ್ರಥಮವಾಗಿ ದಾಖಲಾಗಿರುವ 2 ಮಕ್ಕಳಿಗೆ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ನಾಮಕರಣ ಮಾಡಿದರು.
ಈ ವೇಳೆ ಮಾತನಾಡಿದ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್, ಭಗವಂತನ ಅನುಗ್ರಹವಿರಲೆಂದು ಒಂದು ಮಗುವಿಗೆ ‘ಶಿವಾ’ ಇನ್ನೊಂದು ಮಗುವಿಗೆ ‘ಗುರು’ ಎಂದು ನಾಮಕರಣ ಮಾಡಲಾಗಿದ್ದು, ಮಕ್ಕಳ ಬಗ್ಗೆ ಕಾಳಜಿವಹಿಸಲು ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚನೆಯನ್ನು ನೀಡಿದ್ದೇನೆ ಎಂದರು.
ಈ ಸಂದರ್ಭದಲ್ಲಿ ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿ ಮಹಾಂತೇಶ ಭಜಂತ್ರಿ, ಉಪ ನಿರ್ದೇಶಕರಾದ ನಾಗರಾಜ್ ಆರ್, ಗಂಗಣ್ಣ ಕಲ್ಲೂರ್, ಮಹಾಂತೇಶ ಮತ್ತಿಕೊಪ್ಪ, ಅಡಿವೇಶ ಇಟಗಿ, ಸಚಿನ ಹಿರೇಮಠ, ಸದ್ದಾಂ ಮಾರಿಹಾಳ, ಲೋಕೇಶ್, ಮಹೇಶ್ ಸಂಗಾನಟ್ಟಿ, ಮಲ್ಲಪ್ಪ ಕುಂದರಂಗಿ ಉಪಸ್ಥಿತರಿದ್ದರು.