Latest

ವಕೀಲ ಜಗದೀಶ್ ಬಂಧನ

ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ವಕೀಲ ಜಗದೀಶ್ ಹಾಗೂ ವಕೀಲರ ನಡುವೆ ಗಲಾಟೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ ವಕೀಲ ಜಗದೀಶ್ ಅವರನ್ನು ಹಲಸೂರು ಗೇಟ್ ಪೊಲೀಸರು ಬಂಧಿಸಿದ್ದಾರೆ.

ಕೋರ್ಟ್ ಆವರಣದಲ್ಲಿ ಗಲಾಟೆ ಮಾಡಲು ವಕೀಲರಿಗೆ ಜಗದೀಶ್ ಪ್ರಚೋದನೆ ನೀಡುತ್ತಿದ್ದರು ಎಂದು ವಕೀಲರ ಸಂಘದ ಅಧ್ಯಕ್ಷ ವಿವೇಕ್ ರೆಡ್ಡಿ ಹಾಗೂ ಪದಾಧಿಕಾರಿಗಳು ಬೆಂಗಳೂರು ಪೊಲೀಸ್ ಆಯುಕ್ತರಿಗೆ ದೂರು ನೀಡಿದ್ದರು. ದೂರಿನ ಆಧಾರದ ಮೇರೆಗೆ ವಕೀಲ ಜಗದೀಶ್ ಅವರನ್ನು ಹಲಸೂರು ಗೇಟ್ ಠಾಣೆ ಪೊಲೀಸರುಬೆಂಗಳೂರು ಸಿಟಿ ಸಿವಿಲ್ ಕೋರ್ಟ್ ಬಳಿ ಬಂಧಿಸಿದ್ದಾರೆ.

ವಕೀಲ ಜಗದೀಶ್ ಅವರ ವಿಚಾರಣೆ ನಡೆದಿದ್ದು, ಇಂದು ಸಂಜೆ ವೇಳೆಗೆ ಕೋರಮಂಗಲ ನ್ಯಾಯಾಧೀಶರ ನಿವಾಸದಲ್ಲಿ ಜಡ್ಜ್ ಮುಂದೆ ಹಾಜರುಪಡಿಸಲು ಸಿದ್ಧತೆ ನಡೆಸಲಾಗಿದೆ.
ಆಭರಣ ಪ್ರಿಯರಿಗೆ ಬಿಗ್ ಶಾಕ್

Related Articles

Back to top button