*ನೆರೆ ಪರಿಹಾರ ಪಡೆಯಲು ನಿರಾಕರಿಸಿದ ಅದ್ಯಪಾಡಿ ರೈತರ ಮನವೊಲಿಸಿದ ಸಚಿವ ದಿನೇಶ್ ಗುಂಡೂರಾವ್*
ಪ್ರಗತಿವಾಹಿನಿ ಸುದ್ದಿ: ಅದ್ಯಪಾಡಿ ಗ್ರಾಮದಲ್ಲಿ ಪ್ರವಾಹ ಪರಿಸ್ಥಿತಿಯುಂಟಾಗಿದ್ದು, ಕೃಷಿ ಭೂಮಿ, ಮನೆ ಹಾನಿಯಿಂದಾಗಿ ಜನರು ಕಂಗಾಲಾಗಿದ್ದಾರೆ. ಈ ಹಿನ್ನೆಲೆಯಲ್ಲಿ ನೆರೆ ಪರಿಹಾರ ತೆಗೆದುಕೊಳ್ಳುವಂತೆ ನಿವಾಸಿಗರಿಗೆ ಸಚಿವ ದಿನೇಶ್ ಗುಂಡೂರಾವ್ ಮನವಿ ಮಾಡಿದರು. ಆದರೆ ಅದ್ಯಪಾಡಿ ರೈತರು ನೆರೆ ಪರಿಹಾರ ಪಡೆಯಲು ನಿರಾಕರಿಸಿದರು. ಈ ವೇಳೆ ಸಚಿವರು ರೈತರ ಮನವೊಲಿಕೆ ಮಾದಿದರು.
ನೆರೆ ಪರಿಹಾರಕ್ಕೂ ಶಾಶ್ವತ ಪರಿಹಾರಕ್ಕೂ ಸಂಬಂಧವಿಲ್ಲ. ನೆರೆ ಪರಿಹಾರ ಪಡೆದರೆ ಶಾಶ್ವತ ಪರಿಹಾರ ಆಗಲ್ಲ ಎಂಬ ಭಾವನೆ ಬೇಡ. ಒಂದಕ್ಕೂಂದು ಲಿಂಕ್ ಮಾಡುವ ಅಗತ್ಯವಿಲ್ಲ ಎಂದರು.
ಭತ್ತದ ಗದ್ದೆ ತೋಟ ಮುಳುಗಡೆಯಿಂದ ನಷ್ಟ ಅನುಭವಿಸಿದ್ದೀರಾ. ಅದಕ್ಕೆ ಸರ್ಕಾರದಿಂದ ಸಿಗುವ ನೆರೆ ಪರಿಹರವನ್ನ ಪಡೆಯಿರಿ. ಪಲ್ಗಣಿ ನದಿಯಿಂದಾಗುವ ನೆರೆ ಹಾವಳಿ ತಡೆಯುವ ಶಾಶ್ವತ ಪರಿಹಾರ ಒದಗಿಸುವ ಜವಾಬ್ದಾರಿ ನಮಗೆ ಬಿಡಿ ಎಂದು ರೈತರಲ್ಲಿ ಮನವಿ ಮಾಡಿದರು.
ಸಚಿವರ ಮನವಿಗೆ ಒಪ್ಪಿಗೆ ಸೂಚಿಸಿ ಪರಿಹಾರ ಪಡೆಯುವುದಾಗಿ ಸಚಿವರಿಗೆ ಸ್ಥಳೀಯರು ತಿಳಿಸಿದರು. ಶಾಶ್ವತ ಪರಿಹಾರಕ್ಕೆ ಒತ್ತಾಯಿಸಿ ಕಳೆದ 11 ವರ್ಷದಿಂದ ಅದ್ಯಪಡಿ ರೈತರು, ನಿವಾಸಿಗಳು ನೆರೆ ಪರಿಹಾರವನ್ನ ತಿರಸ್ಕರಿಸುತ್ತಾ ಬಂದಿದ್ದರು.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ