Karnataka News

*ಏರ್ ಶೋ-2025ಕ್ಕೆ ದಿನಗಣನೆ: ಬೃಹತ್ ಕಟ್ಟಡಗಳ ಕ್ರೇನ್ ಬಳಕೆದಾರರಿಗೆ ಮಹತ್ವದ ಸೂಚನೆ*

ಪ್ರಗತಿವಾಹಿನಿ ಸುದ್ದಿ: ರಾಜ್ಯ ರಾಜಧಾ ಬೆಂಗಳೂರಿನಲ್ಲಿ ಲೋಹದ ಹಕ್ಕಿಗಳ ಕಲರವ ಏರೋ ಇಂಡಿಯಾ ಏರ್ ಶೋಗೆ ಇನ್ನೇನು ಕೆಲವೇ ದಿನಗಳು ಬಾಕಿ ಇದೆ. ಏರ್ ಶೋಗೆ ಸಾಕಷ್ಟು ಸಿದ್ಧತೆಗಳನ್ನು ಮಾಡಿಕೊಳ್ಳಲಾಗುತ್ತಿದೆ. ಯಲಹಂಕ ವ್ಯಾಪ್ತಿಯ ವಾಯುಸೇನಾ ನೆಲೆ(Air Force Station)ಯಲ್ಲಿ ಫೆ.2 ರಿಂದ 14ರವರೆಗೆ ಅಂತರಾಷ್ಟ್ರೀಯ ಮಟ್ಟದ ‘ಏರೋ ಇಂಡಿಯಾ-2025’ ನಡೆಯಲಿದೆ. ಈ ಹಿನ್ನೆಲೆಯಲ್ಲಿ ನಿರ್ಮಣ ಹಂತದ ಕಟ್ಟಡಗಳಲ್ಲಿ ಬಳಸುವ ಕ್ರೇನ್ ಗಳನ್ನು ಸ್ಥಗಿತಗೊಳಿಸಲು ಸೂಚಿಸಲಾಗಿದೆ.

Home add -Advt

ಏರ್ ಶೋ ಹಿನ್ನೆಲೆಯಲ್ಲಿ ಯಲಹಂಕ ವಾಯುಸೇನಾ ನೆಲೆಯಿಂದ 10.00 ಕಿ.ಮೀ ಅಂತರದಲ್ಲಿ ನಿರ್ಮಾಣ ಹಂತದಲ್ಲಿರುವ ಬೃಹತ್ ಕಟ್ಟಡಗಳಲ್ಲಿ ಉಪಯೋಗಿಸುವ ಕ್ರೇನ್‌ಗಳ ಎತ್ತರವನ್ನು ಫೆ1 ರಿಂದ 14ರವರೆಗೆ ತಗ್ಗಿಸಲು ಹಾಗೂ ಕ್ರೇನ್ ಚಟುವಟಿಕೆಯನ್ನು ಸ್ಥಗಿತಗೊಳಿಸಲು ಬಹುಮಹಡಿ ಕಟ್ಟಡಗಳ ಸಂಸ್ಥೆಗಳು, ಅಭಿವೃದ್ಧಿದಾರರಿಗೆ ನಗರ ಯೋಜನೆ ಉತ್ತರ ವಿಭಾಗದ ಜಂಟಿ ನಿರ್ದೇಶಕರು ಸೂಚನೆ ನೀಡಿದ್ದಾರೆ.

ವಾಯುಸೇನಾ ನೆಲೆಯಿಂದ 10.00 ಕಿ.ಮೀ ಅಂತರದಲ್ಲಿ ನಿರ್ಮಾಣ ಹಂತದಲ್ಲಿರುವ ಎಲ್ಲಾ ಬೃಹತ್ ಕಟ್ಟಡಗಳು, ನಿಯಮಗಳನ್ನು ಉಲ್ಲಂಘಿಸಿದಲ್ಲಿ ಬಿಬಿಎಂಪಿ ಕಾಯ್ದೆ 2020 ಮತ್ತು ಭಾರತೀಯ ಏರ್‌ಕ್ರಾಪ್ಟ್ 1937ರ ರೂಲ್ 91ರ ಅಡಿಯಲ್ಲಿ ಕಾನೂನು ಕ್ರಮ ಕೈಗೊಳ್ಳಲಾಗುವುದೆಂದು ತಿಳಿಸಿದ್ದಾರೆ.

Related Articles

Back to top button