
ಪ್ರಗತಿವಾಹಿನಿ ಸುದ್ದಿ: ಕೃತಿ ವಿಕೋಪ, ಜಲಪ್ರಳಯದಂತ ಘಟನೆಗಳು ವಿಶ್ವದಾದ್ಯಂತ ಸಂಭವಿಸುತ್ತಿದೆ. ಅಫ್ಘಾನಿಸ್ತಾನದಲ್ಲಿ ಪ್ರಬಲ ಭೂಕಂಪ ಸಂಭವಿಸಿದ್ದು, 600ಕ್ಕೂ ಹೆಚ್ಚು ಜನರು ಮೃತಪಟ್ಟಿದ್ದಾರೆ.
ಅಫ್ಘಾನಿಸ್ತಾನದ ಆಗ್ನೇಯ ಭಾಗದಲ್ಲಿ ರಾತ್ರಿ 11:47ರ ಸುಮಾರಿಗೆ ಭೀಕರ ಭೂಕಂಪ ಸಂಭವಿಸಿದೆ. ರಿಕ್ಟರ್ ಮಾಪಕದಲ್ಲಿ ಭೂಕಂಪದ ತೀವ್ರತೆ 6.2ರಷ್ಟು ದಾಖಲಾಗಿದೆ. ಭೂಕಂಪದಿಂದಾಗಿ ಕುನಾಲ್ ಪ್ರಾಂತದಲ್ಲಿ ಮೂರು ಗ್ರಾಮಗಳು ಸಂಪೂರ್ಣ ನೆಲಸಮವಾಗಿವೆ. ಒಂದೇ ಹಳ್ಳಿಯಲ್ಲಿ 30ಕ್ಕೂ ಹೆಚ್ಚು ಜನರು ಸಾವನ್ನಾಪ್ಪಿದ್ದಾರೆ.
ಭೂಕಂಪದಿಂದಾಗಿ 600ಕ್ಕೂ ಹೆಚ್ಚು ಜನರು ಸಾವನ್ನಪ್ಪಿದ್ದಾರೆ. 500ಕ್ಕೂ ಹೆಚ್ಚು ಜನರು ಗಂಭೀರವಾಗಿ ಗಾಯಗೊಂಡಿದ್ದಾರೆ. ಸಾವು-ನೋವಿನ ಸಂಖ್ಯೆ ಇನ್ನಷ್ಟು ಹೆಚ್ಚುವ ಸಾಧ್ಯತೆ ಇದೆ. ರಕ್ಷಣಾ ಕಾರ್ಯಾಚರಣೆ ಮುಂದುವರೆದಿದೆ.