Karnataka News

ಆತಂಕ ಹುಟ್ಟಿಸಿದೆ ಆಫ್ರಿಕನ್ ಹಂದಿ ಜ್ವರ

ಪ್ರಗತಿ ವಾಹಿನಿ ಸುದ್ದಿ, ಕಾಸರಗೋಡು:  ಕಾಸರಗೋಡಿನ ಪೆರ್ಲ ಸಮೀಪದ ಕಾಟುಕುಕ್ಕೆಯಲ್ಲಿ ಆಫ್ರಿಕನ್ ಹಂದಿ ಜ್ವರ ಕಾಣಿಸಿಕೊಂಡ ಪತ್ತೆಯಾಗಿದೆ. ಕೇರಳ – ಕರ್ನಾಟಕ ಗಡಿ ಜಿಲ್ಲೆಯಾದ ಕಾಸರಗೋಡಿನಲ್ಲಿ ಈ ಭಯಾನಕ ರೋಗದ ಸೋಂಕು ಪತ್ತೆಯಾಗಿರುವುದು ದಕ್ಷಿಣ ಕನ್ನಡ ಸೇರಿದಂತೆ ಕರ್ನಾಟಕದಲ್ಲೂ ಆತಂಕಕ್ಕೆ ಕಾರಣವಾಗಿದೆ.
ಸೋಂಕು ಪತ್ತೆಯಾದ ಕೇಂದ್ರದಿಂದ ಹತ್ತು ಕಿ.ಮೀ. ವ್ಯಾಪ್ತಿಯಲ್ಲಿ ಮೂರು ತಿಂಗಳಿಗೆ ಹಂದಿ ಮಾಂಸಕ್ಕೆ ನಿಷೇಧ ಹೇರಲಾಗಿದೆ.
ಈ ಕೇಂದ್ರದಿಂದ ಹಂದಿ ಸಾಗಾಟ, ಹಂದಿ ಮಾಂಸ ಮಾರಾಟ, ಮಾಂಸ ಉತ್ಪನ್ನ ಮೊದಲಾದವುಗಳ ಮಾರಾಟ, ಸಾಗಾಟ ನಿಷೇಧಿಸಲಾಗಿದೆ.

 

ಸೋಂಕು ಪತ್ತೆಯಾದ ಕೇಂದ್ರದ ಒಂದು ಕಿಲೋ ಮೀಟರ್ ವ್ಯಾಪ್ತಿಯಲ್ಲಿನ ಹಂದಿಗಳನ್ನು ಕೊಂದು ಸಂಸ್ಕರಿಸಲಾಗುವುದು. ಇದಕ್ಕಾಗಿ ಜಿಲ್ಲಾ ಮೃಗ ಸಂರಕ್ಷಣಾ ಕಚೇರಿಯ ರಾಫಿಡ್ ರೆಸ್ಪಾನ್ಸ್ ತಂಡವನ್ನು ರಚಿಸಲಾಗಿದೆ.
ಪೊಲೀಸ್, ಕಂದಾಯ, ಸ್ಥಳಿಯಾಡಲಿತ ಸಂಸ್ಥೆ, ಮೋಟಾರು ವಾಹನ ಇಲಾಖೆ, ಅಗ್ನಿ ಶಾಮಕ ದಳ ಮೊದಲಾದವುಗಳ ನೆರವು ಪಡೆಯಲಾಗುವುದು. ಕಾಸರಗೋಡು ಜಿಲ್ಲಾ ಹೆಚ್ಚುವರಿ ದಂಡನಾಧಿಕಾರಿರವರ ನೇತೃತ್ವದಲ್ಲಿ ತಂಡ ಕಾರ್ಯಾಚರಿಸಲಿದೆ. ಈ ಬಗ್ಗೆ ಪೊಲೀಸ್, ಮೋಟಾರು ವಾಹನ ಇಲಾಖೆ ತಪಾಸಣೆ, ನಿಗಾ ಇರಿಸಲಿದೆ.
https://pragati.taskdun.com/high-court-blocks-new-reservation-a-huge-setback-for-the-government/

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button