Kannada NewsLatest

ಇಬ್ಬರನ್ನು ಭೇಟಿಯಾದ ಬಳಿಕ ರಮೇಶ್ ಜಾರಕಿಹೊಳಿ ಮಹತ್ವದ ನಿರ್ಧಾರ

ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಒಂದೆಡೆ ಶಾಸಕ ಸ್ಥಾನಕ್ಕೂ ರಾಜೀನಾಮೆ ನೀಡುವ ಚಿಂತನೆ ನಡೆಸಿರುವುದಾಗಿ ಹೇಳಿರುವ ಮಾಜಿ ಸಚಿವ ರಮೇಶ್ ಜಾರಕಿಹೊಳಿ ಮತ್ತೊಂದೆಡೆ ಮಂತ್ರಿ ಸ್ಥಾನ ಮರಳಿ ಪಡೆಯಲು ಕಸರತ್ತು ಮುಂದುವರೆಸಿದ್ದಾರೆ.

ಸುತ್ತೂರು ಶ್ರೀಗಳ ಭೇಟಿ, ಆರ್.ಎಸ್.ಎಸ್.ನಾಯಕರ ಭೇಟಿ ಬೆನ್ನಲ್ಲೇ ಇದೀಗ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಹಾಗೂ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್ ಅವರ ಭೇಟಿಗೆ ನಿರ್ಧರಿಸಿದ್ದು, ನಾಯಕರ ಭೇಟಿ ಬಳಿಕ ಮಹತ್ವದ ನಿರ್ಧಾರ ಪ್ರಕಟಿಸಲಿದ್ದಾರೆ ಎನ್ನಲಾಗಿದೆ.

ರಮೇಶ್ ಜಾರಕಿಹೊಳಿ ಎರಡು ಮೂರು ದಿನಗಳಲ್ಲಿ ಸಿಎಂ ಯಡಿಯೂರಪ್ಪ ಹಾಗೂ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್ ಅವರನ್ನು ಭೇಟಿಯಾಗುತ್ತಿದ್ದು, ಸಚಿವ ಸ್ಥಾನಕ್ಕಾಗಿ ಒತ್ತಡದ ತಂತ್ರ ಹೆಣೆದಿದ್ದಾರೆ. ಸಹೋದರರ ಸಲಹೆಯಂತೆ ಮುಂದಿನ ವಾರ ತಮ್ಮ ನಿರ್ಧಾರ ಪ್ರಕಟಿಸುವ ಸಾಧ್ಯತೆ ಇದೆ. ಒಟ್ಟಾರೆ ರಮೇಶ್ ಜಾರಕಿಹೊಳಿ ಮುಂದಿನ ನಡೆ ಕುತೂಹಲ ಕೆರಳಿಸಿದೆ.

ಶೀಘ್ರದಲ್ಲಿ ಕಾಲೇಜು ವಿದ್ಯಾರ್ಥಿಗಳಿಗೆ ಲಸಿಕೆ

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Check Also
Close
Back to top button