Kannada NewsKarnataka NewsLatest

*ಅಖಿಲ ಭಾರತೀಯ ಬ್ರಾಹ್ಮಣ ಮಹಾಸಂಘದ ಜಿಲ್ಲಾ ಘಟಕಕ್ಕೆ ಅಧ್ಯಕ್ಷರು, ಪ್ರಧಾನ ಕಾರ್ಯದರ್ಶಿಗಳ ನೇಮಕ*

ಪ್ರಗತಿವಾಹಿನಿ ಸುದ್ದಿ: ಅಖಿಲ ಭಾರತೀಯ ಬ್ರಾಹ್ಮಣ ಮಹಾಸಂಘ (ರಿ) ತನ್ನ ಸಂಘಟನಾ ಶಕ್ತಿಯನ್ನು ವಿಸ್ತರಿಸುವುದರೊಂದಿಗೆ ಸಮಾಜಮುಖಿ ಚಟುವಟಿಕೆಗಳನ್ನು ಬಲಪಡಿಸಲು, ಬೆಂಗಳೂರು ಉತ್ತರ ಜಿಲ್ಲಾ ಘಟಕದಲ್ಲಿ ಪದಾಧಿಕಾರಿಗಳ ನೇಮಕ ಮಾಡಲಾಗಿದೆ. ಇದೇ ವೇಳೆ ಅವರನ್ನು, ಸನ್ಮಾನ ಮಾಡಲಾಯಿತು.

ಈ ಸಂದರ್ಭದಲ್ಲಿ, ಶ್ರೀನಿವಾಸ್ ಕುಲಕರ್ಣಿ ಅವರನ್ನು ಬೆಂಗಳೂರು ಉತ್ತರ ಜಿಲ್ಲಾ ಘಟಕದ ಅಧ್ಯಕ್ಷರಾಗಿ, ಶ್ವೇತಾ ಶ್ರೀವತ್ಸ ಅವರನ್ನು ಪ್ರಧಾನ ಕಾರ್ಯದರ್ಶಿಯಾಗಿ ಹಾಗೂ ಅಶಾಕುಮಾರಿ ಎ.ಜಿ. ಅವರನ್ನು ಮಹಿಳಾ ಘಟಕದ ಅಧ್ಯಕ್ಷರಾಗಿ ನೇಮಕ ಮಾಡಲಾಯಿತು. ಸಮಾರಂಭದಲ್ಲಿ ರಾಜ್ಯಾಧ್ಯಕ್ಷರಾದ ಪ್ರದೀಪ್ ಜಿ. ಆರ್. ಮತ್ತು ರಾಜ್ಯ ಪ್ರಧಾನ ಕಾರ್ಯದರ್ಶಿ ವಿಶ್ವನಾಥ್ ಜೋಶಿ ಅವರು ಅಧಿಕೃತವಾಗಿ ನೇಮಕಾತಿ ಪತ್ರಗಳನ್ನು ಹಸ್ತಾಂತರಿಸಿದರು.

Home add -Advt

ರಾಜ್ಯ ಮಾಧ್ಯಮ ಪ್ರಭಾರಿ ಶಶಿ ದೇಶಪಾಂಡೆ ಅವರು ಕಾರ್ಯಕ್ರಮದಲ್ಲಿ ವಿಶೇಷ ಅತಿಥಿಗಳಾಗಿ ಹಾಜರಿದ್ದು, ನೂತನ ಪದಾಧಿಕಾರಿಗಳಿಗೆ ಹಾರೈಸಿ, ಸಂಘಟನೆಯ ಧ್ಯೇಯಗಳನ್ನು ಮುಂದುವರಿಸುವ ನಿಟ್ಟಿನಲ್ಲಿ ಸಮುದಾಯದ ಒಗ್ಗಟ್ಟು, ಯುವಜನರ ಶಕ್ತಿ ಹಾಗೂ ಮಹಿಳಾ ಸಬಲೀಕರಣಕ್ಕಾಗಿ ತಾವು ತೊಡಗಿಸಿಕೊಳ್ಳುವುದಾಗಿ ಭರವಸೆ ನೀಡಿದರು.
ಅಖಿಲ ಭಾರತೀಯ ಬ್ರಾಹ್ಮಣ ಮಹಾಸಂಘದ ಈ ನೇಮಕಾತಿ ಮತ್ತು ಸನ್ಮಾನ ಕಾರ್ಯಕ್ರಮವು ಸಂಘಟನೆಯ ಬಲವರ್ಧನೆಗೆ ಹಾಗೂ ಸಮಾಜಮುಖಿ ಚಟುವಟಿಕೆಗಳ ಉತ್ತೇಜನಕ್ಕೆ ಮಹತ್ವದ ಹೆಜ್ಜೆಯಾಗಿದೆ.

Related Articles

Back to top button