EducationKannada NewsKarnataka News

*ಭಾರಿ ಮಳೆ ಹಿನ್ನೆಲೆ ಶಾಲೆಗಳಿಗೆ ರಜೆ ಘೋಷಣೆ*

ಪ್ರಗತಿವಾಹಿನಿ ಸುದ್ದಿ: ಭಾರೀ ವರ್ಷಧಾರೆಯಾಗುತ್ತಿದ್ದು, ಮುಂಜಾಗ್ರತಾ ಕ್ರಮವಾಗಿ ದಕ್ಷಿಣ ಕನ್ನಡ ಜಿಲ್ಲೆಯ ಶಾಲೆಗಳಿಗೆ ನಾಳೆ (ಜೂ.27) ರಜೆ ಘೋಷಿಸಿ ಜಿಲ್ಲಾಡಳಿತ ಆದೇಶ ಹೊರಡಿಸಿದೆ.

ರಾಜ್ಯದ ಹಲವು ಜಿಲ್ಲೆಗಳಲ್ಲಿ ಈಗಾಗಲೇ ಮಳೆ ಆರ್ಭಟ ಮುಂದುವರೆದಿದ್ದು, ಜನ ಜೀವನ ಅಸ್ತವ್ಯಸ್ಥಗೊಂಡಿದೆ.  

ಇನ್ನು ಇಂದು ಬೆಳಗ್ಗಿನಿಂದಲೇ ಜಿಲ್ಲೆಯಾದ್ಯಂತ ಮಳೆರಾಯ ಧೋ ಎಂದು ಸುರಿಯುತ್ತಿದ್ದು, ಜನಜೀವನ ಸಂಕಷ್ಟಕ್ಕೆ ಸಿಲುಕಿದೆ. ಹೀಗಾಗಿ ಮುಂಜಾಗ್ರತೆ ವಹಿಸಿರುವ ಜಿಲ್ಲಾಡಳಿತ ಪ್ರಾಥಮಿ, ಪ್ರೌಢ ಶಾಲೆಗಳಿಗೆ ಮತ್ತು ಅಂಗನವಾಡಿಗಳಿಗೆ ನಾಳೆ ರಜೆ ಘೋಷಣೆ ಮಾಡಿ ಡಿಸಿ ಆದೇಶಿಸಿದ್ದಾರೆ.

Related Articles

Back to top button