Kannada NewsKarnataka NewsLatest

*ಮಾ.6ರಂದು ಸುವರ್ಣ ಸೌಧ ಆವರಣದಲ್ಲಿ ರೈತರಿಗೆ ಕೃಷಿ ಸಲಕರಣೆಗಳ ವಿತರಣಾ ಕಾರ್ಯಕ್ರಮ*

ಪ್ರಗತಿವಾಹಿನಿ ಸುದ್ದಿ: ಬೆಳಗಾವಿ ವಿಭಾಗದ ವ್ಯಾಪ್ತಿಯ ಜಿಲ್ಲೆಗಳ ರೈತರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಬುಧವಾರ(ಮಾ.೬) ಮಧ್ಯಾಹ್ನ ೩ ಗಂಟೆಗೆ ಸುವರ್ಣ ವಿಧಾನಸೌಧದ ಆವರಣದಲ್ಲಿ ಕೃಷಿ ಸಲಕರಣೆಗಳನ್ನು ವಿತರಿಸಲಿದ್ದಾರೆ. ವಿಭಾಗದ ವ್ಯಾಪ್ತಿಯ ಏಳು ಜಿಲ್ಲೆಯ ೨೫೦೦ ರೈತರಿಗೆ ಕೃಷಿ ಸಲಕರಣೆಗಳನ್ನು ವಿತರಿಸಲಾಗುತ್ತಿದೆ.

Home add -Advt


ಕೂರಿಗೆ, ನೇಗಿಲು, ಟ್ರ್ಯಾಕ್ಟರ್, ಶುಗರ್ ಕೇನ್ ಹಾರ್ವೆಸ್ಟರ್, ಪವರ್ ಟಿಲ್ಲರ್, ರೋಟೋವೇಟರ್, ಹನಿ ಮತ್ತು ತುಂತುರು ನೀರಾವರಿ ಘಟಕದ ಸಲಕರಣೆಗಳನ್ನು ಕಾರ್ಯಕ್ರಮದಲ್ಲಿ ವಿತರಿಸಲಾಗುವುದು ಎಂದು ಕೃಷಿ ಇಲಾಖೆಯ ಜಂಟಿ ನಿರ್ದೇಶಕರಾದ ಶಿವನಗೌಡ ಪಾಟೀಲ ತಿಳಿಸಿದ್ದಾರೆ.
ಕೃಷಿ ಇಲಾಖೆಯ ಸಚಿವರಾದ ಎನ್.ಚಲುವರಾಯಸ್ವಾಮಿ, ಜಿಲ್ಲಾ ಉಸ್ತುವಾರಿ ಹಾಗೂ ಲೋಕೋಪಯೋಗಿ ಇಲಾಖೆಯ ಸಚಿವರಾದ ಸತೀಶ್ ಜಾರಕಿಹೊಳಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್ ಅವರು ಸೇರಿದಂತೆ ಜಿಲ್ಲೆಯ ಎಲ್ಲ ಜನಪ್ರತಿನಿಧಿಗಳು ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ.


ಸುವರ್ಣ ವಿಧಾನಸೌಧದ ಆವರಣದಲ್ಲಿ ಭವ್ಯ ವೇದಿಕೆಯನ್ನು ನಿರ್ಮಾಣ ಮಾಡಲಾಗುತ್ತಿದ್ದು, ಕಾರ್ಯಕ್ರಮವನ್ನು ಅಚ್ಚುಕಟ್ಟಾಗಿ ನಡೆಸಲು ಸಿದ್ಧತೆಗಳನ್ನು ಮಾಡಿಕೊಳ್ಳಲಾಗುತ್ತಿದೆ ಎಂದು ಶಿವನಗೌಡ ಪಾಟೀಲ ಅವರು ತಿಳಿಸಿದ್ದಾರೆ.

Related Articles

Back to top button