Kannada NewsKarnataka NewsLatest

*ಕೃಷಿ ಅಧಿಕಾರಿಗಳ ಹುದ್ದೆ ನೇಮಕಾತಿ ಪರೀಕ್ಷೆ ಮುಂದೂಡಿಕೆ*

ಪ್ರಗತಿವಾಹಿನಿ ಸುದ್ದಿ: ವಿವಾದಕ್ಕೆ ಕಾರಣವಾಗಿದ್ದ ಕೃಷಿ ಅಧಿಕಾರಿ ಹಾಗೂ ಸಹಾಯಕ ಕೃಷಿ ಅಧಿಕಾರಿ ಹುದ್ದೆಗಳ ನೇಮಕಾತಿ ಪರೀಕ್ಷೆಯನ್ನು ರಾಜ್ಯ ಸರ್ಕಾರ ತಾತ್ಕಾಲಿಕವಾಗಿ ಮುಂದೂಡಿದೆ.

ಆಗಸ್ಟ್ 8 ಮತ್ತು 9 ರಂದು ನಡೆಯಬೇಕಿದ್ದ ಲಿಖಿತ ಪರೀಕ್ಷೆಯನ್ನ ಮುಂದೂಡುವ ಮೂಲಕ ವಿದ್ಯಾರ್ಥಿಗಳ ಹೋರಾಟಕ್ಕೆ ಜಯ ಸಿಕ್ಕಿದೆ. ಕೃಷಿ ಅಧಿಕಾರಿ ಹುದ್ದೆ ನೇಮಕಾತಿ ನಿಯಮಗಳ ಸಂಬಂಧ ಫ್ರೀಡಂ ಪಾರ್ಕಿನಲ್ಲಿ ನಡೆಯುತ್ತಿದ್ದ ಮುಷ್ಕರ ನಿರತರಾಗಿರುವ ಜಿಕೆವಿಕೆ ಕೃಷಿ ವಿಶ್ವವಿದ್ಯಾಲಯ ವಿದ್ಯಾರ್ಥಿಗಳನ್ನು ಇಂದು ಗೃಹ ಸಚಿವ ಪ್ರಿಯಾಂಕ್ ಖರ್ಗೆ ಭೇಟಿಯಾದರು.

ವಿದ್ಯಾರ್ಥಿಗಳ ಬೇಡಿಕೆಗಳನ್ನು ಆಲಿಸಿದ ಸಚಿವರು, ನಮ್ಮ ಕೃಷಿ ಪದವೀಧರರಿಗೆ ಅನ್ಯಾಯವಾಗದಂತೆ, ಪರೀಕ್ಷೆ ನಡೆಸಲು ಸರ್ಕಾರ ಸಿದ್ಧವಿದೆ. ಪರೀಕ್ಷೆಯನ್ನು ತಾತ್ಕಾಲಿಕವಾಗಿ ಮುಂದುಡಲಾಗುವುದು ಎಂದರು.

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button