Kannada NewsKarnataka NewsLatest

ಕೃಷಿ ಸಂಬಂಧತ ಸುದ್ದಿಗಳು

ಕೃಷಿ ಪಂಡಿತ ಪ್ರಶಸ್ತಿಗೆ ಅರ್ಜಿ ಆಹ್ವಾನ

ಪ್ರಗತಿವಾಹಿನಿ ಸುದ್ದಿ,  ಬೆಳಗಾವಿ:

ಕೃಷಿ ಇಲಾಖೆಯು ೨೦೧೮-೧೯ ನೇ ಸಾಲಿನ ಕೃಷಿ ಪಂಡಿತ ಪ್ರಶಸ್ತಿಗೆ ಆಸಕ್ತರಿಂದ ನಾಮ ನಿರ್ದೇಶನಗಳನ್ನು ಆಹ್ವಾನಿಸಲಾಗಿದೆ.
ಅರ್ಜಿ ಸಲ್ಲಿಸಲು ಬಯಸುವ ರೈತರು ನಿಗದಿತ ನಮೂನೆಯ ಅರ್ಜಿಯಲ್ಲಿ (ಅರ್ಜಿಗಳನ್ನು ಸಹಾಯಕ ಕೃಷಿ ನಿರ್ದೇಶಕರ ಕಾರ್ಯಾಲಯದಲ್ಲಿ ಪಡೆಯಬಹುದಾಗಿದೆ) ಪೂರ್ಣ ವಿವರಗಳನ್ನು ದಾಖಲಾತಿಗಳೊಂದಿಗೆ ತಮ್ಮ ತಾಲ್ಲೂಕಿನ ಸಹಾಯಕ ಕೃಷಿ ನಿರ್ದೇಶಕರ ಕಚೇರಿಗೆ ಜುಲೈ ೨೦ ರೊಳಗೆ ಸಲ್ಲಿಸಬಹುದಾಗಿದೆ.
ಹೆಚ್ಚಿನ ಮಾಹಿತಿಗಾಗಿ ಸಮೀಪದ ಸಹಾಯಕ ಕೃಷಿ ನಿರ್ದೇಶಕರು/ಕೃಷಿ ಅಧಿಕಾರಿ, ರೈತ ಸಂಪರ್ಕ ಕೇಂದ್ರ ಇವರನ್ನು ಸಂಪರ್ಕಿಸಬೇಕೆಂದು ಜಂಟಿ ಕೃಷಿ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಬೆಳೆ ಸ್ಪರ್ಧೆಗೆ ರೈತರಿಂದ ಅರ್ಜಿ ಆಹ್ವಾನ

ಕೃಷಿ ಇಲಾಖೆಯು ೨೦೧೯-೨೦ ನೇ ಸಾಲಿನಲ್ಲಿ ಮುಂಗಾರು ಮತ್ತು ಹಿಂಗಾರು ಹಂಗಾಮಿಗೆ ಕೃಷಿ ಪ್ರಶಸ್ತಿ ಯೋಜನೆಯಡಿ ಬೆಳೆ ಸ್ಪರ್ಧೆಯಲ್ಲಿ ಭಾಗವಹಿಸಲು ರೈತರಿಂದ ಅರ್ಜಿಗಳನ್ನು ಆಹ್ವಾನಿಸಿದೆ. ಅರ್ಜಿ ಸಲ್ಲಿಸಲು ಬಯಸುವ ರೈತರು ನಿಗದಿತ ನಮೂನೆಯ ಅರ್ಜಿಯಲ್ಲಿ (ಅರ್ಜಿಗಳನ್ನು ಸಹಾಯಕ ಕೃಷಿ ನಿರ್ದೇಶಕರ ಕಾರ್ಯಾಲಯದಲ್ಲಿ ಪಡೆಯಬಹುದಾಗಿದೆ) ಪೂರ್ಣ ವಿವರಗಳನ್ನು ದಾಖಲಾತಿಗಳೊಂದಿಗೆ ತಮ್ಮ ತಾಲ್ಲೂಕಿನ ಸಹಾಯಕ ಕೃಷಿ ನಿರ್ದೇಶಕರ ಕಚೇರಿಗೆ ಸಲ್ಲಿಸಬಹುದಾಗಿದೆ.
೨೦೧೯-೨೦ ನೇ ಸಾಲಿನ ಕೃಷಿ ಪ್ರಶಸ್ತಿಗೆ ಅರ್ಜಿ ಸಲ್ಲಿಸಲು ಮುಂಗಾರು ಹಂಗಾಮಿಗೆ: ೨೦೧೯ರ ಆಗಸ್ಟ್ ೩೧ ಹಾಗೂ ಹಿಂಗಾರು ಹಂಗಾಮಿಗೆ ೨೦೧೯ರ ನವಂಬರ್ ೩೦ ಕೊನೆಯ ದಿನವಾಗಿದೆ.
ಹೆಚ್ಚಿನ ಮಾಹಿತಿಗಾಗಿ ಸಮೀಪದ ಸಹಾಯಕ ಕೃಷಿ ನಿರ್ದೇಶಕರು, ಕೃಷಿ ಅಧಿಕಾರಿ, ರೈತ ಸಂಪರ್ಕ ಕೇಂದ್ರ ಇವರನ್ನು ಸಂಪರ್ಕಿಸಬೇಕೆಂದು ಜಂಟಿ ಕೃಷಿ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ರೈತ ಸುರಕ್ಷಾ ಪ್ರಧಾನ ಮಂತ್ರಿ ಫಸಲ್ ಬಿಮಾ ಯೋಜನೆ ಅನುಷ್ಠಾನ

ಬೆಳಗಾವಿ ಜಿಲ್ಲೆಯಲ್ಲಿ ೨೦೧೯ ನೇ ಸಾಲಿನ ಮುಂಗಾರು ಹಂಗಾಮಿಗೆ ಕರ್ನಾಟಕ ರೈತ ಸುರಕ್ಷಾ ಪ್ರಧಾನ ಮಂತ್ರಿ ಫಸಲ್ ಬಿಮಾ ಯೋಜನೆಯನ್ನು ಅನುಷ್ಠಾನಗೊಳಿಸಲಾಗುತ್ತಿದ್ದು, ತಾಲೂಕಿನ ಪ್ರಮುಖ ಬೆಳೆಗಳನ್ನು ಗ್ರಾಮ ಪಂಚಾಯತಿ ಮಟ್ಟಕ್ಕೆ ಹಾಗೂ ಉಳಿದ ಬೆಳೆಗಳನ್ನು ಹೋಬಳಿ ಮಟ್ಟದಲ್ಲಿ ಅಧಿಸೂಚಿಸಲಾಗಿರುತ್ತದೆ. ರೂಪದಲ್ಲಿ ’ಇನ್ಸೂರೆನ್ಸ್ ಕಂಪನಿ’ ವತಿಯಿಂದ ನೀಡಲಾಗುವುದು.
ರೈತರು ಸದರಿ ಬೆಳೆ ವಿಮೆ ಯೋಜನೆಯಲ್ಲೆ ಪಾಲ್ಗೊಂಡು ಅಧಿಸೂಚಿತ ಬೆಳೆಗಳಿಗೆ ವಿಮಾ ರಕ್ಷಣೆಯನ್ನು ಒದಗಿಸಬೇಕೆಂದು ಕೋರಲಾಗಿದೆ. ಸದರಿ ಯೋಜನೆಯ ಅನುಕೂಲಗಳು ಈ ಕೆಳಕಂಡಂತೆ ಇರುತ್ತವೆ.
ಪ್ರಕೃತಿ ವಿಕೋಪ, ಕೀಟ, ರೋಗ, ಬಾಧೆಗಳಿಂದ ಅಧಿಸೂಚಿತ ಬೆಳೆ ವಿಫಲವಾದ ಸಂದರ್ಭದಲ್ಲಿ ರೈತರಿಗೆ. ವಿಮಾ ರಕ್ಷಣೆ ಮತ್ತು ಹಣಕಾಸು ’ಬೆಂಬಲ ಒದಗಿಸುವುದು. ಸ್ಥಳ ನಿರ್ಧಿಷ್ಟ ಪ್ರಕೃತಿ ವಿಕೋಪಗಳಾದ ಆಲಿಕಲ್ಲು ಮಳೆ, ಭೂಕುಸಿತ ಮತ್ತು ಬೆಳೆ. ಮುಳುಗಡೆ ಇವುಗಳಿಂದ ಉಂಟಾಗುವ ನಷ್ಟದಿಂದ ರಕ್ಷಣೆ.
ಮಳೆ ಅಭಾವ ಆಥವಾ ಇತರೆ ಪ್ರತಿಕೂಲ ಹವಾಮಾನ ಪರಿಸ್ಥಿತಿಗಳಿಂದ ತಾಲೂಕಿನ ಅಧಿಸೂಚಿತ ಮುಖ್ಯ ಬೆಳೆ ಅಧಿಸೂಚಿತ ವಿಮೆ ಘಟಕದಲ್ಲಿ (ಗ್ರಾಮ ಪಂಚಾಯತ) ಶೇ. ೭೫ ಕ್ಕಿಂತ ಹೆಚ್ಚಿನ ಕ್ಷೇತ್ರದಲ್ಲಿ ಬಿತ್ತನೆ ವಿಫಲಗೊಂಡಲ್ಲಿ ಅಥವಾ ಶೇ. ೭೫ ಕ್ಕಿಂತ ಹೆಚ್ಚಿನ ಕ್ಷೇತ್ರದಲ್ಲಿ ಬಿತ್ತನೆ ಸಾಧ್ಯವಾಗದಿದ್ದಲ್ಲಿ, ಅಂಥ ವಿಮೆ ಘಟಕಗಳಲ್ಲಿ ಅಧಿಸೂಚಿತ ಬೆಳೆಗೆ ಬೆಳೆ ವಿಮೆ ಮಾಡಿಸಿದ ರೈತರಿಗೆ ವಿಮೆ ಮೊತ್ತದ ಶೇ. ೨೫ ರಷ್ಟು ವಿಮೆ ಪರಿಹಾರ.

ಕಟಾವಿನ ನಂತರ ಬೆಳೆಯನ್ನು ಜಮೀನಿನಲ್ಲೇ ಒಣಗಲು ಬಿಟ್ಟಂತಹ ಸಂದರ್ಭದಲ್ಲಿ ಕಟಾವು ಮಾಡಿದ ಎರಡು ವಾರಗಳೊಳಗೆ ಚಂಡಮಾರುತ, ಚಂಡಮಾರುತ ಸಹಿತ ಮಳೆ ಮತ್ತು ಅಕಾಲಿಕ ಮಳೆಯಿಂದಾಗಿ ಬೆಳೆ ನಶವಾದರೆ ವೈಯಕ್ತಿಕವಾಗಿ ವಿಮೆ ಸಂಸ್ಥೆಯು ನಷ್ಟ ನಿರ್ಧಾರ ಮಾಡಿ ಬೆಳೆ. ನಷ್ಟ ಪರಿಹಾರ. ರೈತ ಬಾಂಧವರು ತಮ್ಮ ವ್ಯಾಪ್ತಿಯಲ್ಲಿ ಬರತಕ್ಕಂತಹ ಬ್ಯಾಂಕ್, ಸಹಕಾರಿ ಸಂಘ ಹಾಗೂ ಸಾಮಾನ್ಯ ಸೇವಾ ಕೇಂದ್ರಗಳಲ್ಲಿ ವಿಮೆ ಕಂತನ್ನು ಪಾವತಿಸಿ ಬೆಳೆ ವಿಮೆ ನೋಂದಣಿ ಮಾಡುಬಹುದಾಗಿದೆ.
ಪ್ರಸಕ್ತ ಹಂಗಾಮಿನಲ್ಲಿ ರೈತರು ಈ ಬೆಳೆ ವಿಮೆ ಯಜನೆಯಲ್ಲಿ ಪಾಲ್ಗೊಳ್ಳಲು ಹೆಸರು (ಮಳೆ ಆಶ್ರಿತ) ಬೆಳೆಗೆ ಜುಲೈ ೧೬, ೨೦೧೯ ಹಾಗೂ ಉಳಿದ ಎಲ್ಲಾ ಅಧಿಸೂಚಿತ ಬೆಳೆಗಳಿಗೆ ಜುಲೈ ೩೧. ೨೦೧೯ ಕೊನೆಯ ದಿನಾಂಕವಾಗಿರುತ್ತದೆ.
ಹೆಚ್ಚಿನ ಮಾಹಿತಿಗಾಗಿ ರೈತ ಬಾಂಧವರು ಸ್ಥಳೀಯ ಬ್ಯಾಂಕ್‌ಗಳು, ಸಹಕಾರ ಸಂಘಗಳು, ತೋಟಗಾರಿಕೆ ಹಾಗೂ ಕಂದಾಯ” ಇಲಾಖೆಯ ಅಧಿಕಾರಿಗಳನ್ನು ಹಾಗೂ ವಿಮಾ ಸಂಸ್ಥೆಯ ಪ್ರತಿನಿಧಿಗಳನ್ನು ಸಂಪರ್ಕಿಸಬಹುದಾಗಿದೆ ಎಂದು ಜಂಟಿ ಕೃಷಿ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಪ್ರಧಾನ ಮಂತ್ರಿ ಕಿಸಾನ ಸಮ್ಮಾನ ನಿಧಿ: ಕೃಷಿ ರಥ ರೂಪಕ ವಾಹನಕ್ಕೆ ಚಾಲನೆ

ಪ್ರಧಾನ ಮಂತ್ರಿ ಕಿಸಾನ ಸಮ್ಮಾನ ನಿಧಿ ಅಂಗವಾಗಿ ಬೆಳಗಾವಿ ತಾಲೂಕಿನ ಕೃಷಿ ರಥ ರೂಪಕ ವಾಹನಕ್ಕೆ ಜಿಲ್ಲಾ ಪಂಚಾಯತ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳಾದ ರಾಜೇಂದ್ರ ಕೆ.ವ್ಹಿ ಅವರು (ಜೂನ್ ೨೭) ಜಿಲ್ಲಾ ಪಂಚಾಯತ ಆವರಣದಲ್ಲಿ ಚಾಲನೆ ನೀಡಿದರು.
ಈ ಸಂದರ್ಭದಲ್ಲಿ ಜಂಟಿ ಕೃಷಿ ನಿರ್ದೇಶಕ ಜಲಾನಿ ಮೊಕಾಶಿ, ಉಪ ವಿಭಾಗಾಧಿಕಾರಿಗಳಾದ ಕವಿತಾ ಯೋಗಪ್ಪನವರ, ಸಹಾಯಕ ಕೃಷಿ ನಿರ್ದೇಶಕ ಜಿ.ಬಿ.ಕಲ್ಯಾಣಿ, ತಹಶೀಲ್ದಾರಾದ ಮಂಜುಳಾ ನಾಯಕ, ತಾಲೂಕು ಪಂಚಾಯತ ಕಾರ್ಯನಿರ್ವಾಹಕ ಅಧಿಕಾರಿಗಳಾದ ಪದ್ಮಜಾ ಪಾಟೀಲ ಸೇರಿದಂತೆ ಇತರರು ಉಪಸ್ಧಿತರಿದ್ದರು.

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button