Kannada NewsLatestNational

*ವಿಮಾನ ದುರಂತದಲ್ಲಿ ಗುಜರಾತ್ ಮಾಜಿ ಸಿಎಂ ವಿಜಯ್ ರೂಪಾನಿ ದುರ್ಮರಣ*

ಪ್ರಗತಿವಾಹಿನಿ ಸುದ್ದಿ: ಗುಜರಾತ್ ನ ಅಹಮದಾಬಾದ್ ನಲ್ಲಿ ಸಂಭವಿಸಿದ ಏರ್ ಇಂಡಿಯಾ ವಿಮಾನ ದುರಂತದಲ್ಲಿ ಗುಜರಾತ್ ಮಾಜಿ ಸಿಎಂ ವಿಜಯ್ ರೂಪಾನಿ ಸೇರಿದಂತೆ ಎಲ್ಲಾ 242 ಪ್ರಯಾಣಿಕರು ಸಾವನ್ನಪ್ಪಿದ್ದಾರೆ.

ಈ ಬಗ್ಗೆ ಎಪಿ ಸುದ್ದಿ ಸಂಸ್ಥೆ ಗುಜರಾತ್ ಕಮಿಷನರ್ ನೀಡಿದ ಮಾಹಿತಿ ಹಿನ್ನೆಲೆಯಲ್ಲಿ ಅಧಿಕೃತವಾಗಿ ತಿಳಿಸಿದೆ. ಏರ್ ಇಂಡಿಯಾ ವಿಮಾನ ಪತನದಲ್ಲಿ ಗುಜರಾತ್ ಮಾಜಿ ಸಿಎಂ ವಿಜಯ್ ರೂಪಾನಿ ಮೃತಪಟ್ಟಿದ್ದಾರೆ. ಅಲ್ಲದೇ ವಿಮಾನದಲ್ಲಿದ್ದ ಯಾರೂ ಕೂಡ ಬದುಕುಳಿದಿಲ್ಲ ಎಂದು ತಿಳಿಸಿದೆ.

ಅಹಮದಾಬಾದ್ ಏರ್ ಪೋರ್ಟ್ ನಿಂದ ಲಂಡನ್ ಗೆ ತೆರಳುತ್ತಿದ್ದ AI-171 ವಿಮಾನ ಟೇಕ್ ಆಫ್ ಆದ ಕೆಲವೇ ನಿಮಷಗಳಲ್ಲಿ ಕಟ್ಟಡಗಳಿಗೆ ಅಪ್ಪಳಿಸಿ ಹೊತ್ತಿ ಉರಿದು ನೆಲಕ್ಕೆ ಬಿದ್ದಿದೆ. ವಿಮಾನದ ತಾಂತ್ರಿಕ ದೋಷವೇ ಘಟನೆಗೆ ಕಾರಣ ಎನ್ನಲಾಗಿದೆ. ದುರಂತದಲ್ಲಿ ಗುಜರಾತ್ ಮಾಜಿ ಸಿಎಂ ಸೇರಿದಂತೆ ವಿಮಾನದಲ್ಲಿದ್ದ ಎಲ್ಲಾ 242 ಜನರೂ ಸಾವನ್ನಪ್ಪಿದ್ದಾರೆ.

ಗುಜರಾತ್ ಮಾಜಿ ಸಿಎಂ ವಿಜಯ್ ರೂಪಾನಿ ಲಂಡನ್ ಗೆ ತನ್ನ ಮಗಳ ಮನೆಗೆ ಇದೇ ವಿಮಾನದಲ್ಲಿ ಪ್ರಯಾಣಿಸುತ್ತಿದ್ದರು. ಅಹಮದಾಬಾದ್ ಏರ್ ಪೋರ್ಟ್ ನಿಂದ ಟೇಕ್ ಆಫ್ ಆದ ಕೆಲವೇ ನಿಮಿಷಗಳಲ್ಲಿ ವಿಮನ ಪತನಗೊಂಡು ದುರಂತಕ್ಕೀಡಾಗಿದ್ದಾರೆ.

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button